Labels

Sunday, 6 October 2019

ಆನಂದಮಯಗೆ aanandmayage

ಆನಂದಮಯಗೆ ಚಿನ್ಮಯಗೆ 
ಶ್ರೀಮನ್ನಾರಾಯಣಗೆ ಆರತಿ ಎತ್ತಿರೆ

ವೇದವ ತಂದು ಬೆಟ್ಟವ ಪೊತ್ತು ಧರಣೀಯ
ಸಾಧಿಸಿ ಕಂಭದಿ ಬಂದವಗೆ
ಭೂದಾನವ ಬೇಡಿ ನೃಪರ ಸಂಹರಿಸಿದ
ಆದಿ ಮೂರುತಿಗೆ ಆರತಿ ಎತ್ತಿರೆ 

ಇಂದುವದನೆ ಸೀತೆ ಸಹಿತಲರಣ್ಯದಿ
ನಂದಗೋಕುಲದಲ್ಲಿ ನಲಿದವಗೆ
ಮಂದಗಮನೆಯರ ಮುಂದೆ ನಿರ್ವಾಣದಿ
ನಿಂದ ಮೂರುತಿಗೆ ಆರತಿ ಎತ್ತಿರೆ 

ತುರಗವನೇರಿ ದೈತ್ಯರ ಸೀಳಿ ಸುಜನರ
ಪೊರೆವ ಮಂಗಳ ಹಯವದನನಿಗೆ
ವರದ ಯಾದವಗಿರಿ ಆದಿ ನಾರಾಯಣ
ಚರಣ ಕಮಲಕೆ ಆರತಿ ಎತ್ತಿರೆ 

No comments:

Post a Comment