Labels

Monday 21 October 2019

ಆರು ಬದುಕಿದರಯ್ಯ ಹರಿ ನಿನ್ನ ನಂಬಿ Aaru badukidarayya hari ninna nambi

ಆರು ಬದುಕಿದರಯ್ಯ ಹರಿ ನಿನ್ನ ನಂಬಿ
ತೋರೋ ಈ ಜಗದೋಳಗೆ ಒಬ್ಬರನು ಕಾಣೆ ಪ
ಕಲಹಬಾರದ ಹಾಗೆ ಕರ್ಣನನು ನೀ ಕೊಂದೆ
ಸುಲಭದಲಿ ಕೌರವರ ಮನೆಯ ಮುರಿದೆ ||
ನೆಲನ ಬೇಡಲು ಪೋಗಿ ಬಲಿಯ ತಲೆಯನು ತುಳಿದೆ
ಮೊಲೆಯನುಣಿಸಲು ಬಂದ ಪೂತನಿಯ ಕೊಂದೆ1
ಕರಪತ್ರದಿಂದ ತಾಮ್ರಧ್ವಜನ ತಂದೆಯನು
ಕೊರಳ ಕೊಯಿಸಿದೆ ನೀನು ಕುಂದಿಲ್ಲದೆ ||
ಮರುಳನಂದದಿ ಪೋಗಿ ಭೃಗುಮುನಿಯ ಕಣ್ಣೊಡೆದೆ
ಅರಿತು ನರಕಾಸುರನ ಹೆಂಡಿರನು ಬೆರೆದೆ2
ತಿರಿದುಂಬ ದಾಸರ ಕೈಲಿ ಕಪ್ಪವ ಕೊಂಬೆ
ಗರುಡವಾಹನ ನಿನ್ನ ಚರಿಯವರಿಯೆ ||
ದೊರೆ ಪುರಂದರ ವಿಠಲ ನಿನ್ನನ್ನು ನಂಬಿದರೆ
ತಿರುಪೆಯಾ ಹುಟ್ಟಲೊಲ್ಲದು ಕೇಳೊ ಹರಿಯೆ 3

No comments:

Post a Comment