Labels

Tuesday 22 October 2019

ಆವನಾವನ ಕಾಯ್ವ Aavantan kaayda

ಆವನಾವನ ಕಾಯ್ವ ಅವನಿಯೊಳಗೆ
ದೇವದೇವೇಶ ಶ್ರೀ ಹರಿಯಲ್ಲದೆ ಪ.
ಆವ ತಂದೆಯು ಸಲಹಿದನು ಪ್ರಹ್ಲಾದನ
ಆವ ತಾಯಿ ಸಲಹಿದಳು ಧ್ರುವರಾಯನ
ಆವ ಸುತ ಸಲಹಿದನು ಆ ಉಗ್ರಸೇನನ
ಜೀವರಿಗೆ ಪೋಷಕನು ಹರಿಯಲ್ಲದೆ 1
ಆವ ಬಂಧುವು ಸಲಹಿದನು ಗಜರಾಜನನು
ಆವ ಪತಿ ಕಾಯ್ದ ದ್ರೌಪದಿಯ ಮಾನ ||
ಆವ ಸೋದರರು ಸಲುಹಿದರು ವಿಭೀಷಣನ
ಜೀವರಿಗೆ ದಾತೃ ಶ್ರೀ ಹರಿಯಲ್ಲದೆ 2
ಆವನಾಧಾರ ಅಡವಿಯೊಳಿಪ್ಪ ಮೃಗಗಳಿಗೆ
ಆವ ರಕ್ಷಕ ಪಕ್ಷಿಜಾತಿಗಳಿಗೆ
ಆವ ಪೊಷಕನು ಗರ್ಭದಲ್ಲಿದ್ದ ಶಿಶುಗಳಿಗೆ
ದೇವ ಶ್ರೀ ಪುರಂದರವಿಠಲನಲ್ಲದಲೆ 3

No comments:

Post a Comment