ಅಪರಾಧಿ ನಾನಲ್ಲ ಅಪರಾಧವೆನಗಿಲ್ಲ |
ಕಪಟ ನಾಟಕ ಸೂತ್ರಧಾರಿ ನೀನೆ ಪ
ನೀನು ಆಡಿಸಲು ಜಡವೊನಕೆ ಅಭಿನಯಬೊಂಬೆ
ಏನು ಬಲ್ಲದು ಬೇರೆ ಕೃತಿಯನೊಂದ ||
ನೀನಿಟ್ಟ ಸೂತ್ರದಿಂದಲುಗೆ ಕೈಕಾಲುಗಳು |
ನೀನೆ ಮಗ್ಗಿಸಲು ಮಗ್ಗುವ ದೇಹ ತಾನಾಗೆ 1
ಒಂದೆಂಟು ಬಾಗಿಲುಗಳುಳ್ಳ ಪಟ್ಟಣಕೆ ತನ-
ಗೆಂದು ಇಪ್ಪತ್ತಾರು ಮನೆಯಾಳ್ಗಳ ||
ತಂದು ಕಾವಲುನಿಲಿಸಿ ಎನ್ನ ನೀನೊಳಗಿಟ್ಟು
ಮುಂದೆ ಭವಭವದಿ ದಣಿಪುದು ನಿನ್ನದನ್ಯಾಯ 2
ಯಂತ್ರವಾಹಕ ನೀನೆ ಒಳಗೆ ಇದ್ದೂ ಎನ್ನ-ಸ್ವ
ತಂತ್ರನೆಂದೆನಿಸಿ ಕೊಲಿಸುವರೆ ಹೇಳೊ ||
ಕಂತುಪಿತ ಲಕ್ಷ್ಮೀಶ ಎಂತಾದಡಂತಹುದ
ನಂತ ಮೂರುತಿ ನಮ್ಮ ಪುರಂದರ ವಿಠಲ 3
No comments:
Post a Comment