Labels

Sunday, 6 October 2019

ಬದುಕಿದೆನು ಬದುಕಿದೆನು Badukideno Badukideno

ಬದುಕಿದೆನು ಬದುಕಿದೆನು ಭವವೆನಗೆ ಹಿಂಗಿತು
ಪದುಮನಾಭನ ಪಾದದೊಲುಮೆ ಎನಗಾಯಿತು ||ಪ|| 

ಮುಕ್ತರಾದರು ಎನ್ನ ನೂರೊಂದು ಕುಲದವರು
ಮುಕ್ತಿ ಮಾರ್ಗಕೆ ಯೋಗ್ಯ ನಾನಾದೆನು
ಮುಕ್ತಿದಾಯಕನ ಭಕ್ತಿಗೆ ಮನವು ನೆಲೆಸಿತು
ವ್ಯಕ್ತವಾಯಿತು ನಾಲಿಗೆಯೊಳು ಹರಿನಾಮ ||1||

ಹರಿಯ ತೀರ್ಥ ಪ್ರಸಾದವಿಂದೆನಗೆ ದೊರಕಿತು
ಹರಿಕಥಾಮೃತವೆನ್ನ ಕಿವಿಗೊದಗಿತೋ
ಹರಿದಾಸರು ಎನ್ನ ಬಂಧು ಬಳಗಾದರು 
ಹರಿಮುದ್ರೆ ಎನಗಾಭರಣವಾಯಿತು ||2||



ಹಿಂದೆನ್ನ ಸಂತತಿಗೆ ಸಕಲ ಸಾಧನವಾಯಿತು
ಮುಂದೆನ್ನ ಜನ್ಮವು ಸಫಲ
ವಾಯಿತು
ತಂದೆ 
ಪುರಂದರ ವಿಠಲನೆಂದೆಂಬ ಪರದೈವ
ಬಂದು ಹೃದಯದಲಿ ನೆಲೆಯಾಗಿ ನಿಂತ ||3

No comments:

Post a Comment