ಭೂಷಣಕೆ ಭೂಷಣ ಇದು ಭೂಷಣ
ಶೇಷಗಿರಿವಾಸ ಶ್ರೀ ವರವೆಂಕಟೇಶ ||ಪ||
ಶೇಷಗಿರಿವಾಸ ಶ್ರೀ ವರವೆಂಕಟೇಶ ||ಪ||
ನಾಲಿಗ್ಗೆ ಭೂಷಣ ನಾರಾಯಣ ನಾಮ
ಕಾಲಿಗೆ ಭೂಷಣ ಹರಿಯಾತ್ರೆಯು
ಆಲಯಕೆ ಭೂಷಣ ತುಲಸಿ ವೃಂದಾವನ ವಿ-
ಶಾಲ ಕರ್ಣಕೆ ಭೂಷಣ ವಿಷ್ಣುಕಥೆಯು ||೧||
ಕಾಲಿಗೆ ಭೂಷಣ ಹರಿಯಾತ್ರೆಯು
ಆಲಯಕೆ ಭೂಷಣ ತುಲಸಿ ವೃಂದಾವನ ವಿ-
ಶಾಲ ಕರ್ಣಕೆ ಭೂಷಣ ವಿಷ್ಣುಕಥೆಯು ||೧||
ದಾನವೇ ಭೂಷಣ ಇರುವ ಹಸ್ತಂಗಳಿಗೆ
ಮಾನವೇ ಭೂಷಣ ಮಾನವರಿಗೆ
ಜ್ಞಾನವೇ ಭೂಷಣ ಮುನಿಯೋಗಿವರರಿಗೆ
ಮಾನಿನಿಗೆ ಭೂಷಣ ಪತಿಭಕ್ತಿಯು ||೨||
ಮಾನವೇ ಭೂಷಣ ಮಾನವರಿಗೆ
ಜ್ಞಾನವೇ ಭೂಷಣ ಮುನಿಯೋಗಿವರರಿಗೆ
ಮಾನಿನಿಗೆ ಭೂಷಣ ಪತಿಭಕ್ತಿಯು ||೨||
ರಂಗನನು ನೋಡುವುದೇ ಕಂಗಳಿಗೆ ಭೂಷಣ
ಮಂಗಳಾಂಗಗೆ ಮಣಿವ ಶಿರ ಭೂಷಣ
ಶೃಂಗಾರ ತುಲಸಿ ಮಣಿ ಕೊರಳಿಗೆ ಭೂಷಣ
ರಂಗವಿಠಲ ನಿಮ್ಮ ನಾಮ ಅತಿ ಭೂಷಣ ||೩|
ಮಂಗಳಾಂಗಗೆ ಮಣಿವ ಶಿರ ಭೂಷಣ
ಶೃಂಗಾರ ತುಲಸಿ ಮಣಿ ಕೊರಳಿಗೆ ಭೂಷಣ
ರಂಗವಿಠಲ ನಿಮ್ಮ ನಾಮ ಅತಿ ಭೂಷಣ ||೩|
No comments:
Post a Comment