Monday, 7 October 2019

ದಾರಿಯಾವುದಯ್ಯಾ daariyavudayya

ದಾರಿಯಾವುದಯ್ಯಾ ವೈಕುಂಠಕೆ ದಾರಿ ತೋರಿಸಯ್ಯಾ
ದಾರಿ ಯಾವುದಯ್ಯ ದಾರಿ ತೋರಿಸಯ್ಯ
ದಾರಿ ಯಾವುದಯ್ಯ ದಾರಿ ತೋರಿಸಯ್ಯ
ಆಧಾರಮೂರುತಿ ನಿನ್ನ ಪಾದ ಸೇರುವುದಕ್ಕೆ
ಅನುಭವದನುಭವದಿ ಕತ್ತಲೆಯೊಳು
ಬಲು ಅಂಜುತ ನಡುಗಿ
ಬಳಲುತ್ತ ತಿರುಗಿದೆ ಹಾದಿಯ ಕಾಣದೆ
ಹೊಳೆವಂತ ದಾರಿಯ ತೋರೋ ನಾರಾಯಣ
ಪಾಪ ಪೂರ್ವದಲಿ ಮಾಡಿದುದಕೆ
ಲೇಪವಾಗಿದೆ ಕರ್ಮ
ಈ ಪರಿಯಿಂದಲಿ ನಿನ್ನ ನೆನೆಸಿಕೊಂಬೆ
ಶ್ರೀಪತಿ ಸಲಹೆನ್ನ ಧೂಪ ನಾರಾಯಣ
ಇನ್ನು ನಾ ಜನಿಸಲಾರೆ ಭೂಮಿಯ ಮೇಲೆ
ನಿನ್ನ ದಾಸನಾದೆನೋ
ಪನ್ನಗಶಯನ ಶ್ರೀ ಪುರಂದರ ವಿಠಲ
ಇನ್ನು ಪುಟ್ಟಿಸದಿರು ಎನ್ನ ನಾರಾಯಣ

No comments:

Post a Comment