Sunday, 6 October 2019

ದಯಮಾಡೆ ದಯಮಾಡೆ dayamade

ದಯಮಾಡೆ ದಯಮಾಡೆ ತಾಯೆ ವಾಗ್ದೇವಿ ||

ಅನುಪಲ್ಲವಿ
ದಯದಿಂದ ನೀನೆನ್ನ ನೋಡೆ ವಾಗ್ದೇವಿ ||

ಚರಣ
ಹಿತದಿ ಸನ್ಮತಿಯ ಶ್ರೀಮತಿದೇವಿ ನೀಡೆ
ವ್ರತತಿಜನೇತ್ರೆ ಭಾರತಿ ನೀ ದಯಮಾಡೆ ||೧|

ಸುಮುಖೀ ತ್ವಚ್ಚರಣಾಬ್ಜ ದ್ರುಮಛಾಯಶ್ರಿತರ
ಸುಮತಿಗಳೊಳಗಿಟ್ಟು ಮಮತೆಯಿಂ ಸಲಹೆ||೨||

ಜಗನ್ನಾಥವಿಠಲನ ಅಂಘ್ರಿಗಳ ಸೇವೆಯೊಳು
ಸುಗುಣೆ ಸನ್ಮತಿಕೊಟ್ಟು ಬೇಗೆನ್ನ ಸಲಹೆ||೩

No comments:

Post a Comment