Thursday, 17 October 2019

ಆವ ರೋಗವೊ ಎನಗೆ ದೇವಧನ್ವಂತ್ರಿ dhanvantri

ಆವ ರೋಗವೊ ಎನಗೆ ದೇವಧನ್ವಂತ್ರಿ ||ಪ||
ಸಾವಧಾನದಿ ಕೈಯ ಪಿಡಿದು ನೀ ನೋಡಯ್ಯ ||ಅ.ಪ.||
ಹರಿಮೂರ್ತಿಗಳು ಕಾಣಿಸವು ಎನ್ನ ಕಂಗಳಿಗೆಹರಿಯ ಕೀರ್ತನೆಯು ಕೇಳಿಸದೆನ್ನ ಕಿವಿಗೆ
ಹರಿ ಮಂತ್ರ ಸ್ತೋತ್ರ ಬಾರದು ಎನ್ನ ನಾಲಿಗೆಗೆಹರಿ ಪ್ರಸಾದವು ಜಿಹ್ವೆಗೆ ಸವಿಯಾಗದಯ್ಯ||1||
ಹರಿಪಾದ ಸೇವೆಗೆನ್ನ ಹಸ್ತಗಳು ಚಲಿಸವುಗುರುಹಿರಿಯರಂಘ್ರಿಗೆ ಶಿರ ಬಾಗದು
ಹರಿಯ ನಿರ್ಮಾಲ್ಯವಾಘ್ರಾಣಿಸದು ನಾಸಿಕವುಹರಿಯಾತ್ರೆಗಳಿಗೆನ್ನ ಕಾಲೇಳದಯ್ಯ||2||
ಅನಾಥಬಂಧು ಗೋಪಾಲವಿಠಲರೇಯಎನ್ನ ಭಾಗದ ವೈದ್ಯ ನೀನೆಯಾದೆ
ಅನಾದಿ ಕಾಲದ ಭವರೋಗ ಕಳೆಯಯ್ಯನಾನೆಂದಿಗು ಮರೆಯೆ ನೀ ಮಾಡಿದುಪಕಾರ ||3||

No comments:

Post a Comment