ಈಸಬೇಕು ಇದ್ದು ಜಯಿಸಬೇಕು
ಹೇಸಿಕೆ ಸಂಸಾರದಲ್ಲಿ ಲೇಶ ಆಶೆ ಇಡದ ಹಾಗೆ ಪ.
ತಾಮರಸ ಜಲದಂತೆ ಪ್ರೇಮವಿಟ್ಟು ಭವದೊಳು
ಸ್ವಾಮಿರಾಮನೆನುತ ಪಾಡಿ ಕಾಮಿತವ ಕೈಕೊಂಬರೆಲ್ಲ 1
ಗೇರು ಹಣ್ಣಿನಲ್ಲಿ ಬೀಜ ಸೇರಿದಂತೆ ಸಂಸಾರದಿ
ಮೀರಿ ಆಶೆ ಮಾಡದ ಹಾಗೆ ಧೀರ ಕೃಷ್ಣನ ನೆನೆಯುವರೆಲ್ಲ 2
ಮಾಂಸದಾಶೆಗೆ ಮತ್ಸ್ಯವು ಸಿಲುಕಿ ಹಿಂಸೆ ಪಟ್ಟಪರಿಯೊಳು
ಮೋಸ ಹೋಗದೆ ಪುರಂದರವಿಠಲ ಜಗದೀಶನೆನುತಕೊಂಡಾಡುವರೆಲ್ಲ 3
No comments:
Post a Comment