Labels

Friday, 18 October 2019

ಏಕೆ ಮಮತೆ ಕೊಟ್ಟು eke mamate kottu

ಏಕೆ ಮಮತೆ ಕೊಟ್ಟು ದಣಿಸುವಿ ರಂಗ
ನೀ ಕರುಣದಿ ಎನ್ನ ಪಾಲಿಸೊ ಕೃಷ್ಣ || . ||
ನಿನ್ನ ಹಂಬಲಿಸದೆ ಅನ್ಯ ವಿಷಯಗಳಿಗೆನ್ನನೊಪ್ಪಿಸುವುದು ನೀತವೆ
ಮನ್ನಿಸಿ ದಯದಿ ನೀ ಎನ್ನ ಪಾಲಿಸಲು ನಾ
ನಿನ್ನ ನೇಮಕೆ ಪ್ರತಿಕೂಲನೆ ||  ||
ತನುವು ತನ್ನದು ಅಲ್ಲ ತನು ಸ೦ಬ೦ಧಿಗಳೆ೦ಬೋ
ತನುವ್ಯಾರೊ ತಾನ್ಯಾರೊ ಅವರಿಗೆ
ಧನ ಮೊದಲಾದ ವಿಷಯಗಳ ಅನುಭವ
ಹಿ೦ದಿನ ದೇಹದ೦ತಲ್ಲವೆ ||  ||
ಇ೦ದ್ರಿಯ೦ಗಳು ವಿಷಯದಿ೦ದ ತೆಗೆಯಲು
ಗೋವಿ೦ದ ಎನ್ನ ವಶಕೆ ಬಾರವೊ
ಇ೦ದಿರೆ ಅರಸ ಬ್ರಹ್ಮಾದಿವ೦ದಿತ ನಿನ್ನ
ಬ೦ಧಕಶಕುತಿಗೆ ನಮೋ ನಮೋ ||  ||
ಅರಿತು ಅರಿತು ಎನಗರೆಲವವಾದರು
ವಿರಕುತಿವಿಷಯದಿ ಬಾರದು
ಕರುಣಾಸಾಗರ ನಿನ್ನ ಮರೆಹೊಕ್ಕಲ್ಲದೆ
ಮರುಳು ನೀಗುವ ಬಗೆಗಾಣೆನೊ ||  ||
ಎ೦ದಿಗೆ ನಿನ್ನ ಚಿತ್ತಕ್ಕೆ ಬರುವುದೊ ಸ್ವಾಮಿ
ಅ೦ದೆ ಉದ್ಧರಿಸಯ್ಯ ಕರುಣಿಯೆ
ಸು೦ದರ ವಿಗ್ರಹ ಗೋಪಾಲವಿಠಲ ಸುಖ
ಸಾ೦ದ್ರ ಭವಮೋಚಕ ನಮೋ ನಮೋ ||  ||

1 comment: