Labels

Wednesday, 2 October 2019

ಗೋಪಿನಂದನೆ ಮುಕ್ತೆ Gopinandana mukte

ಗೋಪಿನಂದನೆ ಮುಕ್ತೆ ದೈತ್ಯ ಸಂತತಿಗೆ ಸಂ
ತಾಪವ ಕೊಡುತಿಪ್ಪ ಮಹಾಕಠೋರೆ ಉಗ್ರ
ರೂಪ ವೈಲಕ್ಷಣೆ ಅಜ್ಞಾನಕ್ಕಭಿಮಾನಿನಿ
ತಪತ್ರಯ ವಿನಾಶ ಓಂಕಾರೆ ಹೂಂಕಾರೆ
ಪಾಪಿ ಕಂಸಗೆ ಭಯ ತೋರಿದೆ ಬಾಲ ಲೀಲೆ
ವ್ಯಾಪುತ ಧರ್ಮಮಾರ್ಗ ಪ್ರೇರಣೆ ಅಪ್ರಾಕೃತೆ
ಸ್ವಾಪದದಲಿ ನಿನ್ನ ನೆನೆಸಿದ ಶರಣನಿಗೆ
ಅಪಾರವಾಗಿದ್ದ ವಾರಿಧಿಯಂತೆ ಮಹಾ
ಆಪತ್ತು ಬಂದಿರಲು ಹಾರೆ ಪೋಗೋವು ಸಪ್ತ
ದ್ವೀಪ ನಾಯಿಕೆ ನರಕ ನಿರ್ಲೇಪೆ ತಮೋಗುಣದ
ವ್ಯಾಪಾರ ಮಾಡಿಸಿ ಭಕ್ತ ಜನಕೆ ಪುಣ್ಯ
ಸೋಪಾನ ಮಾಡಿಕೊಡುವ ಸೌಭಾಗ್ಯವಂತೆ ದುರ್ಗೆ
ಪ್ರಾಪುತವಾಗಿ ಎನ್ನ ಮನದಲಿ ನಿಂದು ದುಃಖ
ಕೂಪದಿಂದಲಿ ಎತ್ತಿ ಕಡೆ ಮಾಡು ಜನ್ಮಂಗಳ
ಸೌಪರ್ಣಿ ಮಿಗಿಲಾದ ಸತಿಯರು ನಿತ್ಯ ನಿನ್ನ
ಆಪಾದ ಮೌಳಿತನಕ ಭಜಿಸಿ ಭವ್ಯರಾದರು
ನಾ ಪೇಳುವದೇನು ಪಾಂಡವರ ಮನೋಭಿಷ್ಟೆ
ಈ ಪಂಚ ಭೌತಿಕದಲ್ಲಿ ಆವ ಸಾಧನೆ ಕಾಣೇ
ಶ್ರೀಪತಿ ನಾಮ ಒಂದೇ ಜಿಹ್ವಾಗ್ರದಲಿ ನೆನೆವ
ಔಪಾಸನ ಕೊಡು ರುದ್ರಾದಿಗಳ ವರದೇ
ತಾಪಸ ಜನಪ್ರೀಯ ವಿಜಯವಿಠ್ಠಲ ಮೂರ್ತಿಯ
ಶ್ರೀಪಾದಾರ್ಚನೆ ಮಾಳ್ಪಾ ಶ್ರೀಭೂದುರ್ಗಾ ವರ್ಣಿಶ್ರಯೆ

No comments:

Post a Comment