ಹ್ಯಾಂಗೆ ಬರೆದಿತ್ತೊ ಪ್ರಾಚೀನದಲ್ಲಿ
ಹಾಂಗೆ ಇರಬೇಕು ಸಂಸಾರದಲ್ಲಿ ||ಪ||
ಪಕ್ಷಿ ಅಂಗಳದಲ್ಲಿ ಬಂದು ಕೂತಂತೆ
ಆ ಕ್ಷಣದಲ್ಲಿ ಅದು ಹಾರಿಹೋದಂತೆ ||೧||
ಸಂತೆ ನೆರೆಯಿತು ನಾನಾ ಪರಿ
ತಿರುಗಿ ಹಿಡಿಯಿತು ತಮ್ಮ ತಮ್ಮ ದಾರಿ ||೨||
ಆಡುವ ಮಕ್ಕಳು ಮನೆಯ ಕಟ್ಟಿದರು
ಆಟ ಸಾಕೆಂದು ಮುರಿದೋಡಿದರು ||೩||
ವಸತಿಕಾರನು ವಸತಿಗೆ ಬಂದಂತೆ
ಹೊತ್ತಾರೆದ್ದು ಹೊರಟು ಹೋದಂತೆ ||೪||
ಸಂಸಾರ ಪಾಶವ ನೀನೇ ಬಿಡಿಸಯ್ಯ
ಕಂಸಾರಿ ಪುರಂದರವಿಠ್ಠಲರಾಯ ||೫||
ಹಾಂಗೆ ಇರಬೇಕು ಸಂಸಾರದಲ್ಲಿ ||ಪ||
ಪಕ್ಷಿ ಅಂಗಳದಲ್ಲಿ ಬಂದು ಕೂತಂತೆ
ಆ ಕ್ಷಣದಲ್ಲಿ ಅದು ಹಾರಿಹೋದಂತೆ ||೧||
ಸಂತೆ ನೆರೆಯಿತು ನಾನಾ ಪರಿ
ತಿರುಗಿ ಹಿಡಿಯಿತು ತಮ್ಮ ತಮ್ಮ ದಾರಿ ||೨||
ಆಡುವ ಮಕ್ಕಳು ಮನೆಯ ಕಟ್ಟಿದರು
ಆಟ ಸಾಕೆಂದು ಮುರಿದೋಡಿದರು ||೩||
ವಸತಿಕಾರನು ವಸತಿಗೆ ಬಂದಂತೆ
ಹೊತ್ತಾರೆದ್ದು ಹೊರಟು ಹೋದಂತೆ ||೪||
ಸಂಸಾರ ಪಾಶವ ನೀನೇ ಬಿಡಿಸಯ್ಯ
ಕಂಸಾರಿ ಪುರಂದರವಿಠ್ಠಲರಾಯ ||೫||
No comments:
Post a Comment