Labels

Monday, 7 October 2019

ಇಂಥಾವಗ್ಹ್ಯಾಂಗೆ I thavagyanga

ಇಂಥಾವಗ್ಹ್ಯಾಂಗೆ ಮನಸೋತೆ ಬಲು
ಪಂಥವಾಡಿದ ಜಗನ್ಮಾತೆ ||
ಆವಾಗ ನಾರುವ ಮೈಯ್ಯ ಬಿಚ್ಚಿ
ತೋರಿ ನಲಿಯುವ ಕಾಲು ಕೈಯ್ಯ
ಕೋರೆಯ ಮಸೆಯುತ ಕೊಸರಿಕೊಂಡಸುರನ
ಕರುಳನು ಬಗೆದಂಥ ಅದ್ಭುತ ಮಹಿಮಗೆ ||
ಬಡಬ್ರಾಹ್ಮಣನಾಗಿ ತಿರಿದ ತನ್ನ
ಹಡೆದ ತಾಯಿಯ ಶಿರವರಿದ
ಮಡದಿಗಾಗಿ ದೊಡ್ಡಡವಿಯೊಳ್ಮನೆ ಕಟ್ಟಿ
ಬಿಡದೆ ಸ್ತ್ರೀಯರ ಗೋಕುಲದಲ್ಲಿ ಮೆರೆದ ||
ಬತ್ತಲೆ ನಿಂತಿದ್ದನೀಗ ತೇಜಿ
ಹತ್ತಿ ಮೆರೆವದೊಂದು ಯೋಗ
ಉತ್ತಮ ಹೆಳವನಕಟ್ಟೆ ಶ್ರೀರಂಗ
ಭಕ್ತವತ್ಸಲ ಸ್ವಾಮಿ ದೇವಕೃಪಾಂಗ

No comments:

Post a Comment