Labels

Friday, 18 October 2019

ಇದನಾದರು ಕೊಡದಿದ್ದರೆ idanaru kodadiddare

ಇದನಾದರು ಕೊಡದಿದ್ದರೆ ನಿನ್ನ
ಪದಕಮಲವ ನಂಬಿ ಭಜಿಸುವದೆಂತೊ ||ಪ||
ಗ್ರಾಸವಾಸಗಳಿಗೆ ಇಲ್ಲವೆಂದು ನಿನ್ನ
ಬೇಸರಿಸಿ ಬೇಡ ಬಂದುದಿಲ್ಲ
ವಾಸುದೇವನೆ ನಿನ್ನ ದಾಸರ ದಾಸರ
ದಾಸರ ದಾಸ್ಯವ ಕೊಡು ಸಾಕೆಂದರೆ ||೧||
ಸತಿಸುತರುಗಳ ಸಹಿತನಾಗಿ ನಾ
ಹಿತದಿಂದ ಇರಬೇಕೆಂಬೊದಿಲ್ಲ
ಇತರ ವಿಷಯಂಗಳಿಗೆರಗಿಸದೆ ಮನಕೆ ನಿನ್ನ
ಕಥಾಮೃತವನೆ ಕೊಡು ಸಾಕೆಂದರೆ ||೨||
ಸಾಲವಾಯಿತು, ಸಂಬಳ ಎನಗೆ
ಸಾಲದೆಂದು ಬೇಡ ಬಂದುದಿಲ್ಲ
ನಾಲಗೆಯಲಿ ನಿನ್ನ ನಾಮದುಚ್ಚರಣೆಯ
ಪಾಲಿಸಬೇಕೆಂದು ಬೇಡಿದೆನಲ್ಲದೆ ||೩||
ಒಡವೆ ಒಡ್ಯಾಣಗಳಿಲ್ಲೆಂದು
ಬಡವನೆಂದು ಬೇಡಬಂದುದಿಲ್ಲ
ಒಡೆಯ ನಿನ್ನಡಿಗಳಿಗೆರಗುವುದಕೆ ಮನ
ಬಿಡದಿಹದೊಂದನು ಕೊಡು ಸಾಕೆಂದರೆ ||೪||
ಆಗಬೇಕು ರಾಜ್ಯಭೋಗಗಳೆನಗೆಂದು
ಈಗ ನಾನು ಬೇಡಬಂದುದಿಲ್ಲ
ನಾಗಶಯನ ರಂಗವಿಠಲ ನಾ ನಿನ್ನ
ಬಾಗಿಲ ಕಾಯುವ ಭಾಗ್ಯ ಸಾಕೆಂದರೆ ||೫||

No comments:

Post a Comment