Labels

Friday, 18 October 2019

ಜೋ ಜೋ ಜೋ ಜೋ ಜೋ ರಂಗಧಾಮಜೋ jo jo rangadhama

ಜೋ ಜೋ ಜೋ ಜೋ ಜೋ ರಂಗಧಾಮಜೋ
ಜೋ ಜೋ ಜೋ ಜೋ ರಣಭೀಮ ||pa||
ಜೋ ಜೋ ಭಕ್ತರ ಕಷ್ಟನಿರ್ಧೂಮಜೋ ಜೋ ದಶರಥ ರಾಮ ನಿಸ್ಸೀಮ ||a.pa||
ಭೂಮಿಯ ಚಿನ್ನದ ತೊಟ್ಟಿಲ ಮಾಡಿಸೋಮಸೂರ್ಯರೆಂಬ ಕಲಶವ ಹೂಡಿ
ನೇಮದಿ ವೇದಗಳ ಸರಪಣಿ ಮಾಡಿಆ ಮಹಾಕಾಶಕ್ಕೆ ಕೊಂಡಿಗಳ ಹಾಕಿ||1||
ಸರಸಿಜೋದ್ಭವ ಸರಸ್ವತಿ ಭಾರತಿಗರುಡಶೇಷ ರುದ್ರರಿವರ ಸತಿಯರು
ಸುರರ ಕಿನ್ನರರು ಕಿಂಪುರುಷ ನಾರದರುಪರಿಪರಿ ಗೀತದಿ ತುತಿಸಿ ಪಾಡಿದರು ||2||
ವಸುದೇವಸುತನಾದ ಮುದ್ದುಮುರಾರಿಅಸುರೆ ಪೂತನಿಯ ಪ್ರಾಣಾಪಹಾರಿ
ಅಸಮ ಸಾಹಸಮಲ್ಲ ದೈತ್ಯರ ವೈರಿಶಿಶುವಾಗಿ ದೇವಕೀಗಾನಂದ ತೋರಿ ||3||
ಜಗವನು ಹೊಟ್ಟೆಯೊಳಿಂಬಿಟ್ಟೆ ತ್ರುವ್ವಿಜಗವೆಲ್ಲ ನಿರ್ಮಾಣ ಮಾಡಿದೆ ತ್ರುವ್ವಿ
ನಿಗಮಗೋಚರ ನಿತ್ಯಾನಂದನೆ ತ್ರುವ್ವಿ ಮಗುವೆಂದು ನಾವ್ ತೂಗಬಲ್ಲೆವೆ ತ್ರುವ್ವಿ||4||
ತಮನ ಮರ್ದಿಸಿ ವೇದತತಿಗಳನು ತಂದೆಸುಮನಸರಿಗಾಗಿ ಮಂದರಪೊತ್ತು
ನಿಂದೆಕ್ಷಮೆಗಾಗಿ ಪೋಗಿ ಹಿರಣ್ಯಕನ ಕೊಂದೆನಮಿಸಿ ಕರೆದರೆ ಕಂಬದಿಂದ್ಹೊರಟು ಬಂದೆ ||5||
ತರಳನಾಗಿ ಬಲಿಯ ದಾನವ ಬೇಡ್ದೆಪರಶು ಧರಿಸಿ ಕ್ಷತ್ರಿಯರ ಸವರಿದೆದುರುಳ ರಾವಣನ
ಶಿರವ ಚೆಂಡಾಡಿದೆಚರಿಸಿ ಮನೆಗಳ ಪಾಲ ಮೊಸರನ್ನು ಕುಡಿದೆ ||6||
ಬುದ್ಧನಾಗಿ ಪತಿವ್ರತೆರನಾಳಿದೆಯಲ್ಲಮುದ್ದು ತುರಗವನೇರಿ ಕಲ್ಕ್ಯನಾದ್ಯಲ್ಲ
ಪದ್ಮನಾಭ ಸರಿ ಭಕ್ತವತ್ಸಲನಿದ್ರೆಯ ಮಾಡಯ್ಯ ಶ್ರೀ ರಂಗವಿಠಲ ||7||

1 comment:

  1. Thank you so much for the lyrics. Beautifully compiled, best wishes to the team.

    ReplyDelete