Monday, 7 October 2019

ಕಲ್ಲುಸಕ್ಕರೆ ಕೊಳ್ಳಿರೋ kallu sarkari kolliro

ಕಲ್ಲುಸಕ್ಕರೆ ಕೊಳ್ಳಿರೋ ನೀವೆಲ್ಲರೂ
ಕಲ್ಲುಸಕ್ಕರೆ ಕೊಳ್ಳಿರೋ
ಕಲ್ಲುಸಕ್ಕರೆ ಸವಿ ಬಲ್ಲವರೆ ಬಲ್ಲರು
ಪುಲ್ಲಲೋಚನ ಶ್ರೀ ಕೃಷ್ಣ ನಾಮವೆಂಬ
ಎತ್ತು ಹೇರುಗಳಿಂದ ಹೊತ್ತು ಮಾರುವುದಲ್ಲ
ಒತ್ತೊತ್ತಿ ಗೋಣಿಯೊಳ್ ತುಂಬುವುದಲ್ಲ
ಎತ್ತ ಪೋದರು ಬಾಡಿಗೆ ಸುಂಕವಿದಕಿಲ್ಲ
ಉತ್ತಮ ಸರಕಿದು ಅತಿಲಾಭ ಬರುವಂತ
ನಷ್ಟ ಬೀಳುವುದಲ್ಲ ನಾತ ಹುಟ್ಟುವುದಲ್ಲ
ಎಷ್ಟು ಒಯ್ದರು ಬೆಲೆ ರೊಕ್ಕವಿದಕಿಲ್ಲ
ಕಟ್ಟಿರುವೆಯು ತಿಂದು ಕಡಿಮೆಯಾಗುವುದಲ್ಲ
ಪಟ್ಟಣದೊಳಗೆ ಪ್ರಸಿದ್ಧವಾಗಿರುವಂತ
ಸಂತೆ ಸಂತೆಗೆ ಹೋಗಿ ಶ್ರಮಪಡಿಸುವುದಲ್ಲ
ಸಂತೆಯೊಳಗೆ ಇಟ್ಟು ಮಾರುವುದಲ್ಲ
ಸಂತತ ಭಕ್ತರ ಜ್ಞಾನಕೆ ಸರಿಗೊಂಬ
ಕಾಂತ ಪುರಂದರ ವಿಠಲ ನಾಮವೆಂಬ

No comments:

Post a Comment