Saturday, 5 October 2019

ಕೃಷ್ಣ ಬಾರೊ ಕೃಷ್ಣ ಬಾರೋ Krishna Baro

ಕೃಷ್ಣ ಬಾರೊ ಕೃಷ್ಣ ಬಾರೋ
ಕೃಷ್ಣಯ್ಯ ನೀ ಬಾರಯ್ಯ ||ಪ||

ಸಣ್ಣ ಹೆಜ್ಜೆಯನಿಟ್ಟು ಗೆಜ್ಜೆನಾದಗಳಿಂದ ||ಅ||

ಮನ್ಮಥಜನಕನೆ ಬೇಗನೆ ಬಾರೊ
ಕಮಲಾಪತಿ ನೀ ಬಾರೊ
ಅಮಿತಪರಾಕ್ರಮ ಶಂಕರ ಬಾರೊ
ಕಮನೀಯ ಗಾತ್ರನೆ ಬಾರಯ್ಯ ದೊರೆಯೆ ||1||

ಸುರುಳು ಕೇಶಗಳ ಒಲಿವ ಅಂದ
ಭರದ ಕಸ್ತೂರಿ ತಿಲಕದ ಚಂದ
ಶಿರದಿ ಒಪ್ಪುವ ನವಿಲುಕಣ್ಗಳಿಂದ
ತರತರದ ಆಭರಣಗಳ ಧರಿಸಿ ನೀ ಬಾರೊ ||2||

ಹಾಲುಬೆಣ್ಣೆಗಳ ಕೈಯಲಿ ಕೊಡುವೆ
ಮೇಲಾಗಿ ಭಕ್ಷ್ಯಗಳ ಮುಚ್ಚಿಟ್ಟು ತರುವೆ
ಜಾಲ ಮಾಡದೆ ಬಾರಯ್ಯ ಮರಿಯೆ
ಬಾಲ ಎನ್ನ ತಂದೆ ಪುರಂದರವಿಠಲ ||3||

No comments:

Post a Comment