Labels

Sunday, 6 October 2019

ಲಾಲಿ ಲಾಲಿ ನಮ್ಮ ಹರಿಯೆ ಲಾಲಿ || laali namma harita

ಲಾಲಿ ಲಾಲಿ ನಮ್ಮ ಹರಿಯೆ ಲಾಲಿ ||
ಸುರ ನರರಿಗೆ ಒಲಿದು ಕರುಣವ ಬೀರುವ ದೊರೆಯೆ ಲಾಲಿ ||

ರಾಮ ಲಾಲಿ ಮೇಘಶ್ಯಾಮ ಲಾಲಿ
ರಮಾ ಮನೋಹರ ಅಮಿತ ಸದ್ಗುಣ ಧಾಮ ಲಾಲಿ ||

ಕೃಷ್ಣ ಲಾಲಿ ಸರ್ವೋತ್ಕೃಷ್ಟ ಲಾಲಿ
ದುಷ್ಟರ ಶಿಕ್ಷಿಸಿ ಶಿಷ್ಟರ ಪೊರೆವ ಸಂತುಷ್ಟ ಲಾಲಿ ||

ರಂಗ ಲಾಲಿ ಮಂಗಳಾಂಗ ಲಾಲಿ
ಗಂಗೆಯ ಪಡೆದ ತುಂಗ ಮಹಿಮ ನರಸಿಂಗ ಲಾಲಿ ||

ನಂದ ಲಾಲಿ ಗೋಪಿ ಕಂದ ಲಾಲಿ
ಮಂದರ ಗಿರಿಧರ ಮಧುಸೂದನ ಮುಕುಂದ ಲಾಲಿ ||

ಶೂರ ಲಾಲಿ ರಣಧೀರ ಲಾಲಿ
ಮಾರನಯ್ಯ ನಮ್ಮ ವರ ಪುರಂದರವಿಠಲ ಲಾಲಿ||

No comments:

Post a Comment