Tuesday, 15 October 2019

ಮಹಾದಾದಿದೇವ Mahadadideva

ಮಹಾದಾದಿದೇವ ನಮೋ
ಮಹಾಮಹಿಮನೆ ನಮೋಪ್ರಹಲ್ಲಾದವರದ ಅಹೋಬಲ ನರಸಿಂಹ ||
.ತರಣಿಗುಬ್ಬಸವಾಗೆ ತಾರಾಪತಿಯು ನಡುಗೆಸುರರು ಕಂಗೆಟ್ಟೋಡೆ ನಭವ ಬಿಟ್ಟು ||
ತರುಗಿರಿಗಳಲ್ಲಾಡೆ ಶರಧಿಗಳು ಕುದಿದುಕ್ಕೆಉರಿಯನುಗುಳುತ ಉದ್ಭವಿಸಿದೆಯೊ ನರಸಿಂಹ ||
ಸಿಡಿಲಂತೆ ಗರ್ಜಿಸುತೆ ಕುಡಿಯ ನಾಲಗೆ ಚಾಚಿಅಡಿಗಡಿಗೆ ಹುಂಕರಿಸಿ ಕಡುಕೋಪದಿಂದ ||
ಮುಡಿವಿಡಿದು ರಕ್ಕಸನ ಕೆಡವಿ ನಖದಿಂದೊತ್ತಿಬಿಡದೊಡಲ ಬಗೆದ ಕಡುಗಲಿ ನಾರಸಿಂಹ||
ಸರಸಿಜೋದ್ಭವ ಹರ ಪುರಂದರಾದಿ ಸಮಸ್ತಸುರರು ಅಂಬರದಿ ಪೂಮಳೆಗರೆಯಲು
ಸಿರಿಸಹಿತ ಗರುಡಾದ್ರಿಯಲಿ ನಿಂತು ಭಕುತರನುಕರುಣಿಸುವ ಪುರಂದರವಿಠಲ ನಾರಸಿಂಹ ||

No comments:

Post a Comment