Labels

Tuesday, 15 October 2019

ನಮಃ ಪಾರ್ವತೀ mama parvati

ನಮಃ ಪಾರ್ವತೀ ಪತಿ ನುತಜನಪರ ನಮೊ ನಮೋ ವಿರೂಪಾಕ್ಷ
ರಮಾರಮಣನಲ್ಲಮಲಭಕುತಿ ಕೊಡು ನಮೋ ವಿಶಾಲಾಕ್ಷ
ನೀಲಕಂಠ ತ್ರಿಶೂಲ ಡಮರು ಹಸ್ತಾಲಂಕೃತರಕ್ಷ
ಫಾಲನೇತ್ರ ಕಪಾಲ ರುಂಡಮಣಿ ಮಾಲಾ ಧೃತ ವಕ್ಷ
ಶೀಲರಮ್ಯ ವಿಶಾಲ ಸುಗುಣ ಸಲ್ಲೀಲ ಸುರಾಧ್ಯಕ್ಷ
ಶ್ರೀಲಕುಮೀಶನ ಓಲೈಸುವ ಭಕ್ತಾವಳಿಗಳ ಪಕ್ಷ
ವಾಸವನುತ ಹರಿದಾಸ ಈಶ ಕೈಲಾಸ ವಾಸ ದೇವ
ದಾಶರಥಿಯ ಔಪಾಸಕ ಸುಜನರ ಪೋಷಿಪ ಪ್ರಭಾವ
ಭಾಸಿಸುತಿಹುದು ಅಶೇಷ ಜೀವರಿಗೆ ಈಶನೆಂಬ ಭಾವ
ಶ್ರೀಶನಲ್ಲಿ ಕೀಲಿಸು ಮನವ ಗಿರಿಜೇಶ ಮಹಾದೇವ
ಮೃತ್ಯುಂಜಯ ನಿನ್ನುತ್ತಮ ಪದಯುಗ ಭೃತ್ಯನೋ ಸರ್ವತ್ರ
ಹತ್ತಿರ ಕರೆದು ಅಪತ್ಯನಂತೆ ಪೊರೆಯುತ್ತಿರೋ ತ್ರಿನೇತ್ರ
ತೆತ್ತಿಗನಂತೆ ಕಾಯುತ್ತಿಹೆ ಬಾಣನ ಸತ್ಯದಿ ಸುಚರಿತ್ರ
ಕರ್ತೃ ಉಡುಪಿ ಸರ್ವೋತ್ತಮ ಕೃಷ್ಣನ ಪೌತ್ರ ಕೃಪಾ ಪಾತ್ರ

No comments:

Post a Comment