Labels

Saturday, 12 October 2019

ಮಂಗಳ ಮುಖ್ಯ ಪ್ರಾಣೇಶಗೆ Mangala mukhya praneshage

ಮಂಗಳ ಮುಖ್ಯ ಪ್ರಾಣೇಶಗೆ ||pa||
ಜಯ ಮಂಗಳ ಶುಭಮಂಗಳ ವಾಯುಕುಮಾರನಿಗೆ ||a.pa||
ಅಂಜನಾದೇವಿಯ ಕಂದಗೆ ಮಂಗಳಕಂಜಾಕ್ಷ ಹನುಮಂತಗೆ ಮಂಗಳ
ಸಂಜೀವನವ ತಂದಾತಗೆ ಮಂಗಳಸಜ್ಜನ ಪರಿಪಾಲಗೆ ಮಂಗಳ||1||
ಅತಿ ಬಲವಂತ ಶ್ರೀಭೀಮಗೆ ಮಂಗಳಪ್ರತಿಮಲ್ಲರ ಗೆಲಿದಗೆ ಮಂಗಳ
ಸತಿಯ ಸೀರೆಯ ಸೆಳೆದ ದೈತ್ಯನ ಕೊಂದುಪೃಥ್ವಿ ಮೇಲೆ ಚೆಂಡನಾಡಿದಗೆ ||2||
ಸೀತಾದೇವಿಯ ಬಾಲಗೆ ಮಂಗಳಶ್ರೀರಾಮನ ಭಂಟಗೆ ಮಂಗಳ
ಗೋಪಾಲ ಕೃಷ್ಣನ ಪೂಜೆಯಮಾಡುವಗುರು ಮಧ್ವ ಮುನಿರಾಯಗೆ ಮಂಗಳ||3||

No comments:

Post a Comment