Saturday, 5 October 2019

ಮನ್ನಾರು ಕೃಷ್ಣಗೆ ಮಂಗಳ Mannaru krishnage mangala

ಮನ್ನಾರು ಕೃಷ್ಣಗೆ ಮಂಗಳ
ಜಗವ ಮನ್ನಿಸಿದೊಡೆಯಗೆ ಮಂಗಳ ||ಪಲ್ಲವಿ||

ಬೊಮ್ಮನ ಪಡೆದಗೆ ಭಕ್ತರುದ್ಧಾರಿಗೆ
ಕಮ್ಮಗೋಲನಯ್ಯಗೆ ಮಂಗಳ
ಧರ್ಮರಕ್ಷಕನಿಗೆ ದಾನವಶಿಕ್ಷಗೆ
ನಮ್ಮ ರಕ್ಷಕನಿಗೆ ಮಂಗಳ ||1||

ತುರುಗಳ ಕಾಯ್ದಗೆ ಕರುಣಾಕರನಿಗೆ
ಗಿರಿಯನೆತ್ತಿದವಗೆ ಮಂಗಳ
ವರದ ತಿಮ್ಮಪ್ಪಗೆ ವಾರಿಜನಾಭಗೆ
ಹರಿ ಸರ್ವೋತ್ತಮನಿಗೆ ಮಂಗಳ||2||

ದೇವಕಿದೇವಿಯ ತನಯಗೆ ಮಂಗಳ
ದೇವ ತಿಮ್ಮಪ್ಪಗೆ ಮಂಗಳ
ಮಾವನ ಕೊಂದು ಮಲ್ಲರ ಮಡುಹಿದ
ಪುರಂದರವಿಠಲಗೆ ಮಂಗಳ||3||

No comments:

Post a Comment