Labels

Friday, 18 October 2019

ಮರೆತೆಯೇನೋ ರಂಗಾ marateyano ranga

ಮರೆತೆಯೇನೋ ರಂಗಾ ಮಂಗಳಾಂಗ
ತುರುಕರ ಕಾಯ್ವಲ್ಲಿ ತೊಂಡನಾಗಿದ್ದೆನ್ನ ||ಪ||
ಕೋಲು ಕೈಯಲಿ ಕೊಳಲು ಜೋಲುಗಂಬಳಿ ಹೆಗಲ
ಮ್ಯಾಲೆ ಕಲ್ಲಿ ಚೀಲ ಕೊಂಕಳಲ್ಲಿ
ಕಾಲಗಡಗವನಿಟ್ಟು ಕಾಡೊಳಿಹ ಪಶುಹಿಂಡ
ಲಾಲಿಸುವ ಬಾಲಕರ ಮ್ಯಾಳದೊಳಗಿದ್ದೆನ್ನ ||೧||
ಕಲ್ಲು ಮಣಿ ಕವಡೆಯನು ಕಾಡೊಳಿಹ ಗುಲಗಂಜಿ
ಸಲ್ಲದೊಡವೆಯ ನೀನು ಸರ್ವಾಂಗಕೆ
ಅಲ್ಲಲ್ಲೆಸೆಯೆ ಧರಿಸಿ ನವಿಲಗರಿಗಳ ಗೊಂಡೆ
ಅಲ್ಲಿ ಗೊಲ್ಲರ ಕೂಡ ಚಲ್ಲಾಟ ಮಾಡುತಲಿ ||೨||
ಸಿರಿದೇವಿ ಬಂದು ಸೇರಿದ ಬಳಿಕ ಲೋಕದಲಿ
ಸಿರಿ ಅರಸನೆಂದು ಸೇವಕರರಿವರೋ
ಶರಣಾಗತರ ಪೊರೆವ ಶ್ರೀರಂಗವಿಠಲಯ್ಯ
ನರಸಿಂಗ ನೀನಿರುವ ಪರಿಯು ಮುಂದಿನ ಸಿರಿಯು||೩||

No comments:

Post a Comment