Labels

Monday, 7 October 2019

ಮರುಳು ಮಾಡಿಕೊಂಡೆಯಲ್ಲ Marulu madikondiyallo

ಮರುಳು ಮಾಡಿಕೊಂಡೆಯಲ್ಲ ಮಾಯಾದೇವಿಯೆ ||
ಇರುಳು ಹಗಲು ಏಕವಾಗಿ ಹರಿಯು ನಿನ್ನ ಬಿಡದಿಪ್ಪಂತೆ ||
ಜ್ಞಾನಿಗಳು ನಿತ್ಯ ಪಾನಾದಿಗಳನ್ನು ಬಿಟ್ಟು
ನಾನಾ ವಿಧ ತಪವಿದ್ದರು ಧ್ಯಾನಕ್ಕೆ ಸಿಲುಕದವನ
ಸರ್ವ ಸಂಗವನು ಬಿಟ್ಟು ಸನ್ಯಾಸಿಯಾದ ಕಾಲಕ್ಕು
ಸರ್ವದಾ ತನ್ನೆದೆಯಮೇಲೇ ಬಿಡದೆ ನಿನ್ನ ಧರಿಸಿಪ್ಪಂತೆ
ಪ್ರಳಯ ಕಾಲದಲ್ಲಿ ಆಲದೆಲೆಯ ಮೇಲೆ ಮಲಗಿದ್ದಾಗ
ಹಲವು ಆಭರಣಗಳು ಜಲವು ಆಗಿ ಜಾಣತನದಿ
ರಂಗನು ಭೂಲೋಕದಿ ಭುಜಂಗ ಗಿರಿಯೊಳಲಮೇಲು-
ಮನ್ಗಪತಿಯಾಗಿ ನಿನ್ನ ಅಂಗೀಕರಿಸುವಂತೆ
ಮಕ್ಕಳ ಪಡೆದರೆ ನಿನ್ನ ಚೊಕ್ಕತನವು ಪೋಪುದೆಂದು
ಪೊಕ್ಕುಳೊಳು ಮಕ್ಕಳು ಪಡೆದು ಕಕ್ಕುಲಾತಿ ಪಡುವಂತೆ
ಎಡಕೆ ಭೂಮಿ ಬಲಕೆ ಶ್ರೀಯು ಎದುರಲ್ಲಿ ದುರ್ಗಾದೇವಿ
ತೊಡೆಯ ಮೇಲೆ ಲಕುಮಿಯಾಗಿ ಬಿಡದೆ ಮುದ್ದಾಡಿಸುವಂತೆ
ಎಂದೆಂದಿಗೂ ಮರೆಯ ನಿನ್ನಾನಂದದಿ ಜನರಿಗೆಲ್ಲ
ತಂದು ತೋರೆ ಸ್ವಾಧೀನ ಪುರಂದರ ವಿಟ್ಠಲರಾಯನ

No comments:

Post a Comment