ಒಲಿದೆ ಯಾತಕಮ್ಮಾ ಲಕುಮಿ ವಾಸುದೇವಗೆ?
ಹಲವಂಗದವನ ಹವಣೆ ತಿಳಿದೂ ತಿಳಿದೂ ತಿಳಿಯದ ಹಾಗೆ! ||
ಹಲವಂಗದವನ ಹವಣೆ ತಿಳಿದೂ ತಿಳಿದೂ ತಿಳಿಯದ ಹಾಗೆ! ||
ಕಮಲಗಂಧಿ ಕೋಮಲಾಂಗಿ ಸುಂದರಾಬ್ಜವದನೆ ನೀನು
ರಮಣ ಮತ್ಸ್ಯ ಕಠಿಣಕಾಯ ಸೂಕರಾಸ್ಯನು
ರಮಣೀಯ ಸ್ವರೂಪಿ ನೀನು ಅಮಿತಘೋರ ರೂಪನವನು
ನಮಿಪರಿಷ್ಟದಾನಿ ನೀನು ದಾನವ ಬೇಡುವವನಿಗೆ ||
ರಮಣ ಮತ್ಸ್ಯ ಕಠಿಣಕಾಯ ಸೂಕರಾಸ್ಯನು
ರಮಣೀಯ ಸ್ವರೂಪಿ ನೀನು ಅಮಿತಘೋರ ರೂಪನವನು
ನಮಿಪರಿಷ್ಟದಾನಿ ನೀನು ದಾನವ ಬೇಡುವವನಿಗೆ ||
ಲಲಿತೆ ಚಾರುಶೀಲೆ ನೀನು ಕಲ್ಕಿ ಕಲಹಪ್ರಿಯನವನು
ಕುಲದ ಕುರುಹು ಇಲ್ಲ ಗುಣದ ನೆಲೆಯು ಕಂಡಿಲ್ಲ
ಹಲವು ಕಾಲದವನು ಅವನ ಬಂಧು ಬಳಗ ನಿಷ್ಕಿಂಚನರು
ಜಲಧಿ ಆಲದೆಲೆಯ ಮೇಲೆ ಮಲಗಿ ಬೆರಳ ಚೀಪುವವನಿಗೆ ||
ಕುಲದ ಕುರುಹು ಇಲ್ಲ ಗುಣದ ನೆಲೆಯು ಕಂಡಿಲ್ಲ
ಹಲವು ಕಾಲದವನು ಅವನ ಬಂಧು ಬಳಗ ನಿಷ್ಕಿಂಚನರು
ಜಲಧಿ ಆಲದೆಲೆಯ ಮೇಲೆ ಮಲಗಿ ಬೆರಳ ಚೀಪುವವನಿಗೆ ||
ಸ್ವರತಾನಪೇಕ್ಷಾಕಾಮಿ ನಿದ್ರಾಹೀನ ಅನಶನಿಯು
ಪರುಷರೂಪ ವಾಚ್ಯ ಶಬ್ದ ಅಮಿತ ಭೋಕ್ತನು
ಗುರುಗೋಪಾಲ ವಿಠ್ಠಲನು ನಿರುತ ತನ್ನ ವಕ್ಷದೊಳು
ಅರಮನೆಯ ಮಾಡಿಕೊಂಡು ಮರುಳು ಮಾಡಿದ ಮಾಯಾವಿಗೆ ||
ಪರುಷರೂಪ ವಾಚ್ಯ ಶಬ್ದ ಅಮಿತ ಭೋಕ್ತನು
ಗುರುಗೋಪಾಲ ವಿಠ್ಠಲನು ನಿರುತ ತನ್ನ ವಕ್ಷದೊಳು
ಅರಮನೆಯ ಮಾಡಿಕೊಂಡು ಮರುಳು ಮಾಡಿದ ಮಾಯಾವಿಗೆ ||
Full song is not found bwt82 para missed
ReplyDeleteಐದು ನುಡಿ ಹಾಡು ಇದು. ಸುಳಾದಿ ಕುಪ್ಪೆರಾಯರ ಸಂಗ್ರಹದಿಂದ , ನನ್ನಲ್ಲಿ ಪೂರ್ತಿ ಹಾಡು ಇದೆ.
ReplyDelete