Labels

Sunday, 6 October 2019

ಪಿಳ್ಳಂಗೋವಿಯ pillangoviya

ಪಿಳ್ಳಂಗೋವಿಯ ಚೆಲ್ವ ಕೃಷ್ಣನ ಎಲ್ಲಿ ನೋಡಿದಿರಿ, ರಂಗನ ಎಲ್ಲಿ ನೊಡಿದಿರಿ
ಎಲ್ಲಿ ನೋಡಿದರಲ್ಲಿ ತಾನಿಲ್ಲವಿಲ್ಲವೆಂಬರು ಬಲ್ಲ ಜಾಣರು
ನಂದಗೋಪನ ಮಂದಿರಂಗಳ ಸಂದುಗೊಂದಿನಲಿ
ಚೆಂದಚೆಂದದ ಗೋಪಬಾಲರ ವೃಂದವೃಂದದಲಿ
ಸುಂದರಾಂಗದ ಸುಂದರಿಯರ ಹಿಂದುಮುಂದಿನಲಿ
ಅಂದದಾಕಳ ಕಂದಕರುಗಳ ಮಂದೆಮಂದೆಯಲಿ
ಶ್ರೀ ಗುರುಕ್ತ ಸದಾ ಸುಮಂಗಲ ಯೋಗಯೋಗದಲಿ
ಆಗಮಾರ್ಥದೊಳಗೆ ಮಾಡುವ ಯಾಗಯಾಗದಲಿ
ಶ್ರೀಗೆ ಭಾಗ್ಯನಾಗಿ ವರ್ತಿಪ ಭೋಗಭೋಗದಲಿ
ಭಾಗವತರು ಸದಾ ಬಾಗಿ ಪಾಡುವ ರಾಗದಲಿ
ಈ ಚರಾಚರದೊಳಗೆ ಜನಂಗಳ ಆಚೆ ಈಚೆಯಲಿ
ಖೇಚರೇಂದ್ರನ ಸುತನ ರಥದ ಚೌಕ ಪೀಠದಲಿ
ನಾಚದೆ ಮಾಧವ ಎಂಬ ಭಕ್ತರ ವಾಚಕಂಗಳಲಿ
ಬೀಚುಕೊಂಡದ ಪುರಂದರ ವಿಠಲನ ಲೋಚನಾಗ್ರದಲಿ

No comments:

Post a Comment