ರಾಯಬಾರೊ ತಂದೆತಾಯಿ ಬಾರೊ
ನಮ್ಮ ಕಾಯಿ ಬಾರೊ
ಮಾಯಿಗಳ ಮರ್ದಿಸಿದ ರಾಘವೇಂದ್ರ ||ಪ||
ವಂದಿಪ ಜನರಿಗೆ ಮಂದಾರ ತರುವಂತೆ
ಕುಂದದಭೀಷ್ಟೆಯ ಸಲಿಸುತಿಪ್ಪ ಸುರಮುನಿ
ಮಂದನ ಮತಿಗೆ ರಾಘವೇಂದ್ರ ರಾಯಬಾರೊ ||೧||
ಭಾಸುರಚರಿತನೆ ಭೂಸುರವಂದ್ಯನೆ
ಶ್ರೀಸುಧೀಂದ್ರಾರ್ಯರ ವರಪುತ್ರನೆನಿಸಿದ
ದೇಶಿಕರೊಡೆಯ ರಾಘವೇಂದ್ರ ರಾಯಬಾ ||೨||
ರಾಮಪದಸರಸೀರುಹಭೃಂಗ ಕೃಪಾಂಗ
ಭ್ರಾಮಕಜನರ ಮತಭಂಗ ಮಾಡಿದ
ಧೀಮಂತರೊಡೆಯನೆ ರಾಘವೇಂದ್ರ ರಾಯಬಾರೊ ||೩||
ಆರು ಮೂರೇಳು ನಾಲ್ಕೆಂಟು ಗ್ರಂಥಸಾರಾರ್ಥ
ತೋರಿಸಿದೆ ಸರ್ವರಿಗೆ ಸರ್ವಜ್ಞ
ಸೂರಿಗಳರಸನೆ ರಾಘವೇಂದ್ರ ರಾಯಬಾರೊ ||೪||
ಭೂತಳನಾಥನ ಭೀತಿಯ ಬಿಡಿಸಿದೆ
ಪ್ರೇತತ್ವ ಕಳೆದೆ ಮಹಿಷಿಯ ಶ್ರೀಜಗ
ನ್ನಾಥವಿಠಲನ ಪ್ರೀತಿಪಾತ್ರ ರಾಘವೇಂದ್ರ ರಾಯಬಾರೊ ||೫||
ನಮ್ಮ ಕಾಯಿ ಬಾರೊ
ಮಾಯಿಗಳ ಮರ್ದಿಸಿದ ರಾಘವೇಂದ್ರ ||ಪ||
ವಂದಿಪ ಜನರಿಗೆ ಮಂದಾರ ತರುವಂತೆ
ಕುಂದದಭೀಷ್ಟೆಯ ಸಲಿಸುತಿಪ್ಪ ಸುರಮುನಿ
ಮಂದನ ಮತಿಗೆ ರಾಘವೇಂದ್ರ ರಾಯಬಾರೊ ||೧||
ಭಾಸುರಚರಿತನೆ ಭೂಸುರವಂದ್ಯನೆ
ಶ್ರೀಸುಧೀಂದ್ರಾರ್ಯರ ವರಪುತ್ರನೆನಿಸಿದ
ದೇಶಿಕರೊಡೆಯ ರಾಘವೇಂದ್ರ ರಾಯಬಾ ||೨||
ರಾಮಪದಸರಸೀರುಹಭೃಂಗ ಕೃಪಾಂಗ
ಭ್ರಾಮಕಜನರ ಮತಭಂಗ ಮಾಡಿದ
ಧೀಮಂತರೊಡೆಯನೆ ರಾಘವೇಂದ್ರ ರಾಯಬಾರೊ ||೩||
ಆರು ಮೂರೇಳು ನಾಲ್ಕೆಂಟು ಗ್ರಂಥಸಾರಾರ್ಥ
ತೋರಿಸಿದೆ ಸರ್ವರಿಗೆ ಸರ್ವಜ್ಞ
ಸೂರಿಗಳರಸನೆ ರಾಘವೇಂದ್ರ ರಾಯಬಾರೊ ||೪||
ಭೂತಳನಾಥನ ಭೀತಿಯ ಬಿಡಿಸಿದೆ
ಪ್ರೇತತ್ವ ಕಳೆದೆ ಮಹಿಷಿಯ ಶ್ರೀಜಗ
ನ್ನಾಥವಿಠಲನ ಪ್ರೀತಿಪಾತ್ರ ರಾಘವೇಂದ್ರ ರಾಯಬಾರೊ ||೫||
No comments:
Post a Comment