Labels

Sunday, 6 October 2019

ಸತ್ಯವಂತರ ಸಂಗವಿರಲು satyavantara sangaviralu

ಸತ್ಯವಂತರ ಸಂಗವಿರಲು ತೀರ್ಥವೇತಕೆ
ನಿತ್ಯ ಜ್ಞಾನಿಯಾದ ಮೇಲೆ ಚಿಂತೆ ಯಾತಕೆ||||

ತಾನು ಉಣ್ಣದ ಪರರಿಗಿಕ್ಕದ ಧನವಿದ್ದೇತಕೆ
ಮಾನ ಹೀನನಾಗಿ ಬಾಳ್ವ ಮನುಜನೇತಕೆ
ಜ್ಞಾನವಿಲ್ಲದೇ ನೂರು ಕಾಲ ಬದುಕಲೇತಕೆ
ಮಾನಿನಿಯ ತೊರೆದವಗೆ ಭೋಗವೇತಕೆ||||

ಮಾತು ಕೇಳದೆ ಮಲತು ನಡೆವ ಮಕ್ಕಳೇತಕೆ
ಪ್ರೀತಿ ಇಲ್ಲದೆ ಎಡೆಯನಿಕ್ಕಿದ ಅನ್ನವೇತಕೆ
ನೀತಿಯರಿತು ನಡೆಯದಿರುವ ಬಂಟನೇತಕೆ 
ಸೋತು ಹೆಣ್ಣಿಗೆ ಹೆದರಿ ನಡೆವ ಪುರುಷನೇತಕೆ||||

ಸಂಜ್ಞೆಯರಿತು ನಡೆಯದಿರುವ ಸತಿ ಇದ್ದೇತಕೆ
ಮುನ್ನ ಕೊಟ್ಟು ಪಡೆಯದನ್ನು ಬಯಸಲೇತಕೆ
ಮನ್ನಣೆಯ ನಡೆಸದಿರುವ ದೊರೆಯು ಏತಕೆ
ಚೆನ್ನ ಆದಿ ಕೇಶವನಲ್ಲದ ದೈವವೇತಕೆ |||

No comments:

Post a Comment