ಯಾಕೆ ಇಂಥ ದುಡುಕು ಕೃಷ್ಣಯ್ಯ ನಿನ-
ಗೇಕೆ ಇಂಥ ದುಡುಕು
ಪಾಕಶಾಸನ ವಂದ್ಯ ಪೋಕತನಗಳಿನ್ನು
ಸಾಕುಸಾಕಯ್ಯ ಕೃಷ್ಣ ||ಪ||
ಗೇಕೆ ಇಂಥ ದುಡುಕು
ಪಾಕಶಾಸನ ವಂದ್ಯ ಪೋಕತನಗಳಿನ್ನು
ಸಾಕುಸಾಕಯ್ಯ ಕೃಷ್ಣ ||ಪ||
ಗೊಲ್ಲ ಬಾಲಕರು ನೀವೆಲ್ಲರು ಕೂಡಿಕೊಂಡು
ಗುಲ್ಲು ಮಾಡದೆ ಮೊಸರೆಲ್ಲ ಸವಿದೆಯಂತೆ ಕೃಷ್ಣ ||೧||
ಗುಲ್ಲು ಮಾಡದೆ ಮೊಸರೆಲ್ಲ ಸವಿದೆಯಂತೆ ಕೃಷ್ಣ ||೧||
ಪೂತನಿ ಮೊಲೆಯನ್ನು ಭೀತಿಯಿಲ್ಲದೆ ಉಂಡು
ಘಾತವ ಮಾಡಿದೆ ಮಾತನಾಡಯ್ಯ ಕೃಷ್ಣ ||೨||
ಘಾತವ ಮಾಡಿದೆ ಮಾತನಾಡಯ್ಯ ಕೃಷ್ಣ ||೨||
ದುಷ್ಟ ಕಂಸನ ನೀನು ಕಷ್ಟವಿಲ್ಲದೆ ಮಡುಹಿ
ಮುಷ್ಟಿಕನ ಕೊಂದೆ ದೃಷ್ಟಿ ತಾಕೀತೆಂದು ||೩||
ಮುಷ್ಟಿಕನ ಕೊಂದೆ ದೃಷ್ಟಿ ತಾಕೀತೆಂದು ||೩||
ನಿರ್ಜನ ಸ್ಥಳದಿ ಯಮಳಾರ್ಜುನರನ್ನು ಮಡುಹಿ
ದುರ್ಜನರ ಕೊಂದೆ ಅರ್ಜುನ ಸಾರಥಿ ||೪||
ದುರ್ಜನರ ಕೊಂದೆ ಅರ್ಜುನ ಸಾರಥಿ ||೪||
ಅಂಗಿ ಟೊಪ್ಪಿಗೆ ಉಂಗುರ ಉಡಿದಾರ
ಶೃಂಗರಿಸಿಕೊಂಡು ರಂಗವಿಠಲ ಬಾರೋ ||೫|||
ಶೃಂಗರಿಸಿಕೊಂಡು ರಂಗವಿಠಲ ಬಾರೋ ||೫|||
No comments:
Post a Comment