Labels

Tuesday, 12 November 2019

ಆರಿಗಾರಿಲ್ಲ ಆಪತ್ಕಾಲದೊಳಗೆ aarigaarilla aaptlaladplage

ಆರಿಗಾರಿಲ್ಲ ಆಪತ್ಕಾಲದೊಳಗೆ ಪ
ವಾರಿಜಾಕ್ಷನ ನಾಮ ನೆನೆ ಕಂಡ್ಯ ಮನವೆ ಅ
ಹಸಿದು ಬಳಲುವಾಗ ಹಗೆ ಕೈಗೆ ಸಿಲುಕಿದಾಗದೆಸೆಗೆಟ್ಟು ಅಧಿಕ ವ್ಯಾಧಿಯಲಿ ಇರುವಾಗಅಸಮಾನನಾದಾಗ ಅತಿ ಭೀತಿಗೊಂಡಾಗಬಿಸಜನಾಭನ ನಾಮ ನೆನೆಕಂಡ್ಯ ಮನವೆ 1
ಸಾಲದವರೆಳೆವಾಗ ಚಾಡಿ ಮಾತಿಗೆ ಭೂಪಘಳುಘುಳಿಸುತ ಕೋಪವನು ತೋರಿದಾಗಮೇಲು ತಾನರಿಯದಯೆ ನಿಂದೆ ಹೊಂದಿರುವಾಗನೀಲಮೇಘಶ್ಯಾಮನ ನೆನೆಕಂಡ್ಯ ಮನವೆ 2
ಪಂಥದಲಿರುವಾಗ ಪದವಿ ತಪ್ಪಿರುವಾಗದಂತಿಮದವೇರಿ ಬೆನ್ನತ್ತಿದಾಗಕಂತುಪಿತ ಕಾಗಿನೆಲೆಯಾದಿಕೇಶವನ ನಿ-ಶ್ಚಿಂತೆಯಿಂದಲಿ ನೀನು ನೆನೆಕಂಡ್ಯ ಮನವೆ 3

No comments:

Post a Comment