Labels

Tuesday, 5 November 2019

ಅಂಧಂತಮಸು ಇನ್ನಾರಿಗೆ andhantamasu innarige

ಅಂಧಂತಮಸು ಇನ್ನಾರಿಗೆ ಗೋ-ವಿಂದನ ನಿಂದಿಸುವರಿಗೆ ಪ
ಸಂದೇಹವಿಲ್ಲದೆ ಸಾರಿಸಾರಿಗೆ ವಾಯುನಂದನನ ವಂದಿಸದವರಿಗೆ ಅ
ಮಾತುಮಾತಿಗೆ ಹರಿಯ ನಿಂದಿಸಿ ಸ-ರ್ವೋತ್ತಮ ಶಿವನೆಂದು ವಾದಿಸಿಧಾತುಗ್ರಂಥಗಳೆಲ್ಲ ತೋರಿಸಿ ವೇ-ದಾಂತ ಪ್ರಮಾಣಗಳ ಹಾರಿಸಿಸೋತು ಸಂಕಟಪಟ್ಟು ಘಾತಕ ಒಡಲೊಳಗಿಟ್ಟುನೀತಿ ಹೇಳುವ ಕೆಟ್ಟ ಜಾತಿಗಳಿಗಲ್ಲದೆ 1
ಮೂಲಕವತಾರಕ್ಕೆ ಭೇದವು - ಮುಖ್ಯಶೀಲ ಪಂಡಿತರೊಳಗೆ ವಿವಾದವುಲೀಲಾ ಸಾದೃಶ್ಯವ ತೋರುತ - ಲಿಂಗಭಂಗವಿಲ್ಲದ ದೇಹ ಹಾರುತಮೂಲ ಗುರುವು ಕುಂತೀಬಾಲನೆನ್ನದೆ ವೃಥಾಶೀಲಗೆಟ್ಟಂಥ ಖೂಳರಿಗಲ್ಲದೆ ಮತ್ತೆ 2
ವ್ಯಾಸರ ಮಾತುಗಳಾಡುತ ವಿ-ಶ್ವಾಸ ಘಾತಕತನ ಮಾಡುತದೋಷವೆಂದರೆ ನುಡಿ ಕೇಳದೆ ಸಂ-ತೋಷವೆಂದರೆ ನೋಡಿ ಬಾಳದೆಶೇಷಶಯನನಾದಿಕೇಶವರಾಯನದಾಸರೊಡೆಯ ಮಧ್ವದ್ವೇಷಿಗಳಿಗಲ್ಲದೆ 3

No comments:

Post a Comment