Labels

Monday, 11 November 2019

ಅರಸಿನಂತೆ ಬಂಟನೋ ಹನುಮರಾಯ arasinante bantano hanumantaraya

ಅರಸಿನಂತೆ ಬಂಟನೋ ಹನುಮರಾಯ ಪ
ಅರಸಿನಂತೆ ಬಂಟನೆಂಬುದ ನೀನುಕುರುಹು ತೋರಿದೆ ಮೂರು ಲೋಕಕೆ ಹನುಮ ಅ
ಒಡೆಯನಂಬುಧಿಯೊಳು ಪೊಕ್ಕು ದೈತ್ಯನ ಕೊಂದುತಡೆಯದೆ ಶ್ರುತಿಯನಜಗಿತ್ತನೆಂದುಸಡಗರದಿಂದ ಶರಧಿಯ ದಾಂಟಿ ಮಹಿಜೆ ಪೆ-ರ್ಮುಡಿಯ ಮಾಣಿಕವ ರಾಘವಗಿತ್ತೆ ಹನುಮ 1
ಮಂದರಧರ ಗೋವರ್ಧನ ಗಿರಿಯನು ಲೀಲೆ-ಯಿಂದಲಿ ನಿಂದು ನೆಗಹಿದನೆಂದುಸಿಂಧು ಬಂಧನಕೆ ಸಮಸ್ತ ಪರ್ವತಗಳತಂದು ನಳನ ಕೈಯೊಳಗಿತ್ತೆ ಹನುಮ2
ಸಿರಿಧರ ವರ ಕಾಗಿನೆಲೆಯಾದಿಕೇಶವಸುರರಿಗಮೃತವನು ಎರೆದನೆಂದುವರ ಸಂಜೀವನವ ತಂದು ಸೌಮಿತ್ರಿಗಂದುಎರೆದು ಶ್ರೀರಾಮನ ನಿಜದೂತನೆನಿಸಿದೆ ಹನುಮ 3

No comments:

Post a Comment