ಬದುಕಿದೆನು ಬದುಕಿದೆನು ಭವ ಎನಗೆ ಹಿಂಗಿತು ಪ
ಪದುಮನಾಭನ ಪಾದದೊಲುಮೆ ಎನಗಾಯಿತು ಅ
ಹರಿತೀರ್ಥ ಪ್ರಸಾದ ಎನ್ನ ಜಿಹ್ವೆಗೊದಗಿತುಹರಿಯ ನಾಮಾಮೃತ ಕಿವಿಗೊದಗಿತುಹರಿಯ ದಾಸರು ಎನ್ನ ಬಂಧು ಬಳಗವಾದರುಹರಿಯ ಶ್ರೀಮುದ್ರೆ ಆಭರಣವಾಯ್ತು 1
ಮುಕುತರಾದರು ಎನ್ನ ನೂರೊಂದು ಕುಲದವರುಮುಕುತಿ ಮಾರ್ಗಕೆ ಯೋಗ್ಯ ನಾನಾದೆನೊಅಕಳಂಕ ಶ್ರೀಹರಿ ಭಕುತಿಗೆನ್ನ ಮನ ಬೆಳೆದುರುಕುಮಿಣಿಯರಸ ಕೈವಶನಾದನೆನಗೆ 2
ಇಂದೆನ್ನ ಜೀವಕ್ಕು ಸಕಲ ಸಂಪದವಾಯ್ತುಮುಂದೆನ್ನ ಜನ್ಮ ಸಫಲವಾಯಿತುತಂದೆ ಶ್ರೀ ಕಾಗಿನೆಲೆಯಾದಿಕೇಶವರಾಯಬಂದೆನ್ನ ಹೃದಯದಲಿ ನೆಲೆಯಾಗಿ ನಿಂತ 3
No comments:
Post a Comment