Friday, 29 November 2019

ಬಂಟನಾಗಿ ಬಾಗಿಲ bantanaagi baagilanu

ಬಂಟನಾಗಿ ಬಾಗಿಲ ಕಾಯ್ವೆ ಹರಿಯ ಪ
ವೈಕುಂಠದ ಸೊಂಪಿನ ದಾಸರ ಮನೆಯ ಅ
ಹೊರಸುತ್ತು ಪ್ರಾಕಾರ ನಾ ಸುತ್ತಿ ಬರುವೆಬರುವ ಹೋಗುವರ ವಿಚಾರಿಸುತಿರುವೆಕರದಿ ಕಂಬಿಯ ಪೊತ್ತು ಅಲ್ಲಿ ನಿಂದಿರುವೆ ಶ್ರೀಹರಿಯ ಸಮ್ಮುಖದ ಓಲಗದೊಳಿರುವೆ 1
ತೊತ್ತು ತೊಂಡನಾಗಿ ಬಾಗಿಲ ಕಾಯ್ವೆಚಿತ್ರದ ಚಾವಡಿ ರಜವನು ಬಳಿವೆಮುತ್ತಿನ ರಂಗವಲ್ಲಿಯನಿಟ್ಟು ಬರೆವೆರತ್ನಗಂಬಳಿ ಹೊತ್ತು ಹಾಸುವೆನು 2
ವೇಳೆವೇಳೆಗೆ ನಾನೂಳಿಗವ ಮಾಡುವೆಆಲವಟ್ಟಿಗೆ ಚಾಮರವ ಬೀಸುವೆತಾಳದಂಡಿಗೆ ಭೃಂಗಿ ಮೇಳಗಳ ಕೂಡಿ ಶ್ರೀಲೋಲನ ಕೊಂಡಾಡಿ ಪಾಡುವೆನು 3
ಎಂಜಲ ಹರಿವಾಣಂಗಳ ಬೆಳಗುವೆಕಂಜನಾಭನ ಪಾದಕಮಲವ ತೊಳೆವೆರಂಜಿಪ ಕುಸುಮದ ಮಾಲೆ ತಂದಿಡುವೆಸಂಜೆಗೆ ಪಂಜಿನ ದಾಸನಾಗಿರುವೆ 4
ಮೀಸಲೂಳಿಗವ ನಾ ಮಾಡಿಕೊಂಡಿರುವೆಶೇಷ ಪ್ರಸಾದವ ಉಂಡುಕೊಂಡಿರುವೆಶೇಷಗಿರಿ ಕಾಗಿನೆಲೆಯಾದಿಕೇಶವನದಾಸರ ದಾಸರ ದಾಸರ ಮನೆಯ 5

No comments:

Post a Comment