Labels

Thursday, 7 November 2019

ಏನೆಂದು ಬಣ್ಣಿಸುವೆನೊ ನಾನು |

ಏನೆಂದು ಬಣ್ಣಿಸುವೆನೊ ನಾನು |
ಶ್ರೀನಾಥ ಪ್ರಿಯಳಾದ ಶ್ರೀ ತುಳಸಿ ಮಹಿಮೆಯನು ||pa||
ಜಲದಿ ಮಥನದಿ ಅಮೃತ ಕಲಶ ಬರೆಕಂಡು ಅತಿ |
ಜಲಜಾಂಬಕನ ಪ್ರೇಮಾಂಜಲ ಉದರಲು |
ಇಳಯೊಳದಿರಿಂದುದಿಸಿ ಬೆಳೆದು ನಿಂದಿರೆ ನೋಡಿ |
ಒಲಿದು ಕೋಮಲ ಮುಗುಳು ತಳೆದ ಶ್ರೀಹರಿ ತಾನು|1||
ಹರಿಯು ಧರಿಸಿದ ಕಂಡು ಸುರರೆಲ್ಲ ವಂದಿಸುತ |
ಶಿರದಲಾಂತರು ಪರಮ ಹರುಷದಿಂದ |
ಸಿರಿಸರಸ್ವತಿ ಗಿರಜೆ ನಿರುತ ನಿನ್ನಯ ವ್ರತದಿ |
ಧರೆಯೊಳಗೆ ತಮ್ಮ ತಮ್ಮ ಅರಸರೊಲಿಸಿದರೆಂದು ||2||
ನೋಡಿದರೆ ದುರಿತ ಕುಲ ಓಡುವವು ತನುವ ನೀ
ಡಾಡಿ ಜಲನೀಡಿ ಕೊಂಡಾಡಿ ನಿಂದು |
ಕೂಡೆ ಮೃತ್ತಿಕೆ ಫಣಿಗೆ ತೀಡಿದರೆ ಭಕುತಿಯಲಿ |
ಬೇಡಿದಿಷ್ಟಾರ್ಥ ಕೈಗೂಡಬಹುದಿಳೆಯೊಳಗೆ ||3||
ತುಲಸಿ ಭಕುತಿಲ್ಲದವ ಕಲಿವಂಶದನುಜನವ |
ತುಲಸಿ ಧರಿಸಿದ ತನುವು ಸಲೆಮುಕ್ತಿ ಮಂಟಪವು |
ತುಲಸಿ ಬೆಳೆಹದಿ ಮನೆಯು ಬಲಿದ ಪುಣ್ಯದ ಖಣಿಯು |
ತುಲಸಿ ಇಲ್ಲದ ಗೇಹ ಕಲುಷಾಲಯ||4||
ಮೂಲದಲಿ ಬ್ರಹ್ಮ ತಾ ನೀಲಕಂಠನು ನಡುವೆ |
ಮೇಲುತುದಿಯಲಿ ವಿಷ್ಣು ಲೋಲಾಡುವಾ |
ಸಾಲಕೊಂಬೆಗಳಲಿ ವಿಶಾಲದೇವತೆಗಳಿಹರು |
ತಾಳಿ ಪ್ರೇಮವನು ಮಹೀಪತಿ ನಂದನಾಜ್ಞೆಯಲಿ||5||

No comments:

Post a Comment