Labels

Thursday 21 November 2019

ಛೀ ನಿನ್ನ ಮೋರೆ chi ninna more mele

ಛೀ ನಿನ್ನ ಮೋರೆ ಮೇಲೆ - ಠೊಣ್ಯಛೀ ನಿನ್ನ ಮೋರೆ ಮೇಲೆ ಪ
ಹೊತ್ತರೆದ್ದು ಮುಖ ತೊಳೆದು ಮನೆಮನೆ ಪೋಕರಿ ಅಲೆಯುತಿದ್ದೆವಿತ್ತ ಮದದಿ ಪರಸ್ತ್ರೀಯರ ಕಂಡು ಅರ್ತಿಬಡುತಲಿದ್ದೆಲೆತ್ತ ಪಗಡೆ ಚದುರಂಗ ಆಟದಲ್ಲೆ ಹೊತ್ತು ಕಳೆಯುತಿದ್ದೆನಿತ್ಯ ನಿತ್ಯ ಈ ಪರಿ ಆಯುಷ್ಯವ ವ್ಯರ್ಥ ಕಳೆಯುತಿದ್ದೆ ಠೊಣ್ಯ 1
ಕಂಡ ಕಂಡಲ್ಲಿಗೆ ಪೋಗಿ ಧನಂಗಳ ಕೊಂಡು ಬರುತ್ತಲಿದ್ದೆಹೆಂಡಿರು ಮಕ್ಕಳು ಹಿತದವರೆಂದು ಕೊಂಡಾಡುತಲಿದ್ದೆಖೋಡಿ ಮಾತುಗಳನು ಹೇಳಿ ಮಂದಿಯ ಕುಂಡೆ ಚಿವುಟುತಿದ್ದೆಭಂಡ ಬಾಳು ಇದು ರಂಡೆ ಗಂಡ ಕಂಡ್ಯ ಯಮನ ಬಾಧೆ ಠೊಣ್ಯ2
ಮಾನವ ಜನ್ಮಕೆ ಬಂದು ಪುಣ್ಯ ಮತ್ತೇನೂ ಮಾಡದೆ ಹೋದೆದಾನವಾಂತ ಸತ್ಪಾತ್ರರಿಗೆ ನೀ ದೀನತ್ವವ ಪಡೆದೆe್ಞÁನಶೂನ್ಯ ಮದವೇರಿದ ಸೊಕ್ಕಿದ ಕೋಣಕೆ ಹುಟ್ಟಿದ್ದೆದೀನರಕ್ಷಕಾದಿಕೇಶವ ವಿಠಲಂಗೆ ನೀನತಿ ದೂರಾದೆ ಠೊಣ್ಯ 3

No comments:

Post a Comment