Thursday, 21 November 2019

ಡಿಂಬದಲ್ಲಿ ಇರುವ ಜೀವ dimbadalli iruva jeeva

ಡಿಂಬದಲ್ಲಿ ಇರುವ ಜೀವ ಕಂಬಸೂತ್ರ ಗೊಂಬೆಯಂತೆಎಂದಿಗಿದ್ದರೊಂದು ದಿನ ಸಾವು ತಪ್ಪದು ಪ
ಹುಟ್ಟುತೇನು ತಾರಲಿಲ್ಲ ಸಾಯುತೇನು ಒಯ್ಯಲಿಲ್ಲಸುಟ್ಟು ಸುಟ್ಟು ಸುಣ್ಣದ ಹರಳಾಯಿತೀ ದೇಹಹೊಟ್ಟೆ ಭಾಳ ಕೆಟ್ಟದೆಂದು ಎಷ್ಟು ಕಷ್ಟ ಪಟ್ಟರೂನುಬಿಟ್ಟು ಹೋಗುವಾಗ ಗೇಣು ಬಟ್ಟೆ ಕಾಣದು1
ಹತ್ತು ಎಂಟು ಲಕ್ಷ ಗಳಿಸಿ ಮತ್ತೆ ಸಾಲದೆಂದು ಪರರಅರ್ಥಕಾಗಿ ಆಸೆಪಟ್ಟು ಸುಳ್ಳು ನ್ಯಾಯ ಮಾಡ್ವರುಬಿತ್ತಿ ಬೆಳೆದು ತನ್ನದೆಂಬ ವ್ಯರ್ಥಚಿಂತೆಯನ್ನು ಮಾಡೆಸತ್ತು ಹೋದ ಮೇಲೆ ಅರ್ಥ ಯಾರಿಗಾಹುದೊ 2
ಹೊನ್ನು ಹೆಣ್ಣು ಮಣ್ಣು ಮೂರು ತನ್ನಲಿದ್ದು ಉಣ್ಣಲಿಲ್ಲಅಣ್ಣತಮ್ಮ ತಾಯಿ ತಂದೆ ಬಯಸಲಾಗದುಅನ್ನ ವಸ್ತ್ರ ಭೋಗಕಾಗಿ ತನ್ನ ಸುಖವ ಕಾಣಲಿಲ್ಲಮಣ್ಣುಪಾಲು ಆದಮೇಲೆ ಯಾರಿಗಾಹುದೊ 3
ಬೆಳ್ಳಿ ಬಂಗರಿಟ್ಟುಕೊಂಡು ಒಳ್ಳೆ ವಸ್ತ್ರ ಹೊದ್ದುಕೊಂಡುಅಳ್ಳಾಚಾರಿ ಗೊಂಬೆಯಂತೆ ಆಡಿ ಹೋಯಿತುಹಳ್ಳ ಹರಿದು ಹೋಗುವಾಗ ಗುಳ್ಳೆ ಬಂದು ಒಡೆಯುವಂತೆಉಳ್ಳೆ ಪೊರೆಯಂತೆ ಕಾಣೊ ಸಂಸಾರದಾಟವು 4
ವಾರ್ತೆ ಕೀರ್ತಿಯೆಂಬುವೆರಡು ಸತ್ತ ಮೇಲೆ ಬಂದವಯ್ಯವಸ್ತು ಪ್ರಾಣನಾಯಕನು ಎಲ್ಲಿ ದೊರಕ್ಯಾನುಕರ್ತೃ ಕಾಗಿನೆಲೆಯಾದಿಕೇಶವನ ಚರಣಕಮಲನಿತ್ಯದಲ್ಲಿ ಭಜಿಸಿ ಸುಖಿಯಾಗಿ ಬಾಳೆಲೊ 5

No comments:

Post a Comment