Friday, 15 November 2019

ಎಲ್ಲಾರು ಮಾಡುವುದು ellaru Maaduvadu

ಎಲ್ಲಾರು ಮಾಡುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿಪ
ವೇದಶಾಸ್ತ್ರ ಪಂಚಾಂಗವ ಓದಿಕೊಂಡು ಅನ್ಯರಿಗೆಬೋಧನೆಯ ಮಾಡುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿ 1
ಚಂಡಭಟರಾಗಿ ನಡೆದು ಕತ್ತಿ ಢಾಲು ಕೈಲಿ ಹಿಡಿದುಖಂಡ ತುಂಡ ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 2
ಅಂಗಡಿ ಮುಂಗಟ್ಟನ್ಹೂಡಿ ವ್ಯಂಗ್ಯ ಮಾತುಗಳನ್ನಾಡಿಭಂಗ ಬಿದ್ದು ಗಳಿಸುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 3
ಕುಂಟೆ ತುದಿಗೆ ಕೊರಡು ಹಾಕಿ ಹೆಂಟೆ ಮಣ್ಣು ಸಮನು ಮಾಡಿರೆಂಟೆ ಹೊಡೆದು ಬೆಳೆಸುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 4
ಬೆಲ್ಲದಂತೆ ಮಾತಾನಾಡಿ ಎಲ್ಲರನ್ನು ಮರುಳು ಮಾಡಿಸುಳ್ಳು ಬೊಗಳಿ ತಿಂಬುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 5
ಕೊಟ್ಟಣವನು ಕುಟ್ಟಿಕೊಂಡು ಕಟ್ಟಿಗೆಯನು ಹೊತ್ತುಕೊಂಡುಕಷ್ಟ ಮಾಡಿ ಉಣ್ಣುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 6
ತಾಳ ದಂಡಿಗೆ ಶ್ರುತಿ ಮೇಳ ತಂಬೂರಿಯ ಹಿಡಿದುಕೊಂಡುಸೂಳೆಯಂತೆ ಕುಣಿಯುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 7
ಸಂನ್ಯಾಸಿ ಜಂಗಮ ಜೋಗಿ ಜಟ್ಟಿ ಮೊಂಡ ಬೈರಾಗಿನಾನಾ ವೇಷಗಳೆಲ್ಲ ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 8
ಹಳ್ಳದಲ್ಲಿ ಕುಳಿತುಕೊಂಡು ಕಲ್ಲು ದೊಣ್ಣೆ ಹಿಡಿದುಕೊಂಡುಕಳ್ಳತನವ ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 9
ಅಂದಣ ಪಲ್ಲಕ್ಕಿ ಏರಿ ಮಂದಿ ಮಾರ್ಬಲ ಕೂಡಿಚಂದದಿಂದ ಮೆರೆಯುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 10
ಉನ್ನತ ಕಾಗಿನೆಲೆಯಾದಿಕೇಶವನಾ ಧ್ಯಾನವನ್ನುಮನಮುಟ್ಟಿ ಮಾಡುವುದು ಮುಕ್ತಿಗಾಗಿ ಆನಂದಕಾಗಿ 11
_____

No comments:

Post a Comment