Thursday, 14 November 2019

ಎಂದಿದ್ದರೀ ಕೊಂಪೆ Endiddiri kompe

ಎಂದಿದ್ದರೀ ಕೊಂಪೆ ಎನಗೆ ನಂಬಿಕೆಯಿಲ್ಲ ಪ
ಮುಂದರಿತು ಶ್ರೀಹರಿಯ ಭಜಿಸುವುದು ಲೇಸುಅ
ಎಲುವುಗಳು ತೊಲೆಜಂತೆ ನರಗಳವು ಬಿಗಿದಂತೆಬಲಿದ ಚರ್ಮವು ಮೇಲು ಹೊದಿಕೆಯಂತೆಗಳಗಳನೆ ನುಡಿವ ನಾಲಗೆ ಗಂಟೆಯುಲಿಯಂತೆಕೆಲಕಾಲಕೀ ಕೊಂಪೆ ಕಡೆಗಾಹುದಂತೆ 1
ಕಂಡಿಗಳು ಒಂಬತ್ತು ಕಳಬಂಟರೈವರುಅಂಡಲೆವುದೊತ್ತಿನಲಿ ಷಡುವರ್ಗವುಮಂಡಲಕೆ ಹೊಸಪರಿಯ ಮನ್ಮಥನ ಠಾಣ್ಯವಿದುಮಂಡೆ ಹೋಗುವುದನ್ನು ಅರಿಯದೀ ಕೊಂಪೆ2
ಕೊಂಪೆಯಲಿ ಶೃಂಗಾರ ಕೊಂಡಾಡಲಳವಲ್ಲಕೆಂಪು ಬಣ್ಣಗಳಿಂದ ಚೆನ್ನಾಯಿತುಇಂಪಿನಲಿ ಕಾಗಿನೆಲೆಯಾದಿಕೇಶವನನ್ನುಸೊಂಪಿನಲಿ ನೆನೆನೆನೆದು ಸುಖಿಯಾಗು ಮನುಜಾ 3

No comments:

Post a Comment