Wednesday, 13 November 2019

ಎಂತಹುದೊ ನಿನ್ನಯ ಭಕುತಿ entahado ninnaya bhakuti

ಎಂತಹುದೊ ನಿನ್ನಯ ಭಕುತಿ ಎನಗೆ - ಶ್ರೀ-ಕಾಂತ ನಿನ್ನಯ ಒಲುಮೆಯಿಲ್ಲದ ಮೂಢಾತ್ಮನಿಗೆ ಪ
ಹಿಂದೆ ಮಾಡಿದ ಸುಕೃತ ಫಲವು ಮೊದಲಿನಿತಿಲ್ಲಇಂದು ಬಂದಡೆ ಒಳ್ಳೆ ಮತಿಯ ಕೊಡಲಿಲ್ಲಸಂದ ವಯಸನು ತಿಳಿದು ಕುಂದುತಿದೆ ಎನ್ನ ಮನ-ದಂಧಕಾರವ ಬಿಡಿಸಿ ಹೊಂದಿಸು e್ಞÁನವನು 1
ವೇದಶಾಸ್ತ್ರ ಶಬ್ದ ತರ್ಕ ಮೀಮಾಂಸೆಗಳಓದಿದವನಲ್ಲ ನಿನ್ನಯ ಭಕುತಿಗಧಿಕವಾದ ಇನ್ನೊಂದೇನನುಸುರುವೆನು ನಾ ಮುನ್ನ ಸಂ-ಪಾದಿಸುವ ಭಕುತಿ ಇನ್ನೆಂತಿಹುದೊ ದೇವ 2
ಹುಟ್ಟಿದ ಮೊದಲುಗೊಂಡು ಇಂದು ಪರಿಯಂತರವುಭ್ರಷ್ಟನಾಗಿ ಪರರ ಸೇವೆಯಿಂದಿರುತಿಹೆನುಇಷ್ಟಲ್ಲದಿನ್ನೆನಗೆ ತೃಪ್ತಿ ಇನ್ನೆಂತಹುದೀಕಷ್ಟ ಶರೀರದೊಳು ತೊಳಲಲಾರೆನು ಹರಿಯೆ 3
ನರಜನ್ಮವೆಂಬ ಪಾತಕದ ಪಂಜರದೊಳಗೆಸ್ಥಿರವೆಂಬೊ ಅಹಂಕೃತಿ ಜೀವನವ ನಿರ್ಮಿಸಿಎರವಿನ ಮಾತಾಪಿತರನುಜರೆಂಬಉರಿಕಾವು ಕ್ಷಯವೆಂಬ ಸರಿಗಳನು ವಂದಿಸುವೆನು 4
ಇನಿತುಪರಿಯಲಿ ನಾನು ಹಲುಬಿದೊಡೆನೀನು ಸುಮ್ಮನಿದ್ದೊಡೆ ಬಹು ಅಪಕೀರ್ತಿಯುನಿನ್ನ ದಾಸಗೊಲಿದು ಸಲಿಸಯ್ಯ ಮನದಿಷ್ಟಕನಕಾದ್ರಿಯೊಳು ನೆಲಸಿದಾದಿಕೇಶವರಾಯ 5

No comments:

Post a Comment