Friday, 15 November 2019

ಏನು ಇಲ್ಲದ ಎರಡು ದಿನದ enu Illa da eradu dinada

ಏನು ಇಲ್ಲದ ಎರಡು ದಿನದ ಸಂಸಾರe್ಞÁನದಲಿ ದಾನಧರ್ಮವ ಮಾಡಿರಯ್ಯ ಪ
ಹಸಿದು ಬಂದವರಿಗೆ ಅಶನವೀಯಲು ಬೇಕುಶಿಶುವಿಗೆ ಪಾಲ್ಬೆಣ್ಣೆಯನುಣಿಸಬೇಕುಹಸನಾದ ಭೂಮಿಯನು ಧಾರೆಯೆರೆಯಲು ಬೇಕುಪುಸಿಯಾಡದಲೆ ಭಾಷೆ ನಡೆಸಲೇ ಬೇಕು1
ಕಳ್ಳತನಗಳ ಮಾಡಿ ಒಡಲ ಹೊರೆಯಲು ಬೇಡಕುಳ್ಳಿರ್ದ ಸಭೆಯೊಳಗೆ ಕುತ್ಸಿತವು ಬೇಡಒಳ್ಳೆಯವ ನಾನೆಂದು ಬಲು ಹೆಮ್ಮೆಪಡಬೇಡಬಾಳ್ವೆ ಸ್ಥಿರವೆಂದು ನೀ ನಂಬಿ ಕೆಡಬೇಡ 2
ದೊರೆತನವು ಬಂದಾಗ ಕೆಟ್ಟುದ ನುಡಿಯಬೇಡಸಿರಿ ಬಂದ ಕಾಲಕ್ಕೆ ಬಲು ಮೆರೆಯಬೇಡಸಿರಿವಂತ ಶ್ರೀ ಕಾಗಿನೆಲೆಯಾದಿಕೇಶವನಚರಣ ಕಮಲವ ಸೇರಿ ಸುಖಿಯಾಗು ಮನುಜ 3

No comments:

Post a Comment