ಕನಕದಾಸನ ಮೇಲೆ ದಯ ಮಾಡಲು ವ್ಯಾಸಮುನಿ ಮಠಿಕರೆಲ್ಲರು ದೂರುತಿಹರೊ ಪ.
ತೀರ್ಥವನು ಕೊಡುವಾಗ ಕನಕನ್ನ ಕರೆಯೆನಲುದೂರ್ತರಾಗಿದ್ದ ವಿದ್ವಾಂಸರೆಲ್ಲಸಾರ್ಥಕವಾಯ್ತು ಇವರ ಸನ್ಯಾಸಿತನವೆಲ್ಲಪೂತ್ರ್ಯಾಗಲೆಂದು ಯತಿ ನಗುತಲಿಹನು 1
ಮರುದಿನ ಅವರವರ ಪರೀಕ್ಷಿಸಬೇಕೆಂದುಕರೆದು ಸನ್ಯಾಸಿಗಳ ಕನಕಸಹಿತತ್ವರಿತದಲಿ ಕರದಲ್ಲಿ ಕದಳಿ ಫಲವನೆ ಕೊಟ್ಟುಯಾರಿರದ ಸ್ಥಳದಲ್ಲಿ ಮೆದ್ದು ಬನ್ನಿರಿ ಎನಲು2
ಊರ ಹೊರಗೆ ಹೋಗಿ ಬ್ಯಾರೆ ಬ್ಯಾರೆ ಕುಳಿತುತ್ವರಿತದಿಂ ಮೆದ್ದು ವಿದ್ವಾಂಸರೆಲ್ಲತೋರಲಿಲ್ಲವು ಎನಗೆ ಏಕಾಂತ ಸ್ಥಳವೆನುತಸಾರಿ ಕದಳಿ ಫಲವ ತಂದು ಮುಂದಿಟ್ಟ 3
ಡಿಂಬದೊಳು ಶಬ್ದ ವಾಗಾದಿ ಶ್ರೋತೃಗಳಲ್ಲಿಇಂಬಾಗಿ ತತ್ತ್ವೇಶರೆಲ್ಲ ತುಂಬಿಹರುತಿಂಬುವುದು ಹ್ಯಾಂಗೆನುತ ವ್ಯಾಸರಾಯರ ಕೇಳೆಕಂಬದಂತಾದರವರೆಲ್ಲ ಕುಳಿತವರು 4
ಮಾಣಿಕವು ಕೋಡಗನ ಕೈಯಲ್ಲಿ ಇದ್ದಂತೆಕೋಣನಿದಿರಿಗೆ ಕಿನ್ನರಿಯ ಮೀಟಿದಂತೆವೇಣುಧ್ವನಿ ಬಧಿರನ ಬಳಿ ಹೊರಡಿಸಿದಂತೆ ಕಣ್ಕಾಣದವನಿಗೆ ಕನ್ನಡಿಯ ತೋರಿದಂತೆ 5
ನೋಡಿದಿರ ಈ ಕನಕನಾಡುವ ಮಾತುಗಳಮೂಢ ಜನರರಿಯಬಲ್ಲರೆ ಮಹಿಮೆಯನಾಡಾಡಿಯಂತೆಯೆ ಮಾಡಿಬಿಟ್ಟರು ಇವಗೆ ನಾಡೆಲ್ಲ ಹುಡುಕಿದರು ಈಡಾರ ಕಾಣೆ6
ಕರದಲಿ ಮೂರ್ತಿಯ ಪಿಡಿದು ಕೇಳುತ್ತಿರಲುಅರಿಯದe್ಞÁನದಲಿ ಪೇಳುತ್ತಿರಲುತ್ವರದಿ ಕನಕನು ಬಂದು ವಾಸುದೇವನ ರೂಪಪರಬೊಮ್ಮ ಪುರಂದರ ವಿಠಲನೆಂದ
No comments:
Post a Comment