Friday, 15 November 2019

ಕಂಡೆ ನಾ ತಂಡ kande naa tanda

ಕಂಡೆ ನಾ ತಂಡ ತಂಡದ ಹಿಂಡು ಹಿಂಡು ದೈವ ಪ್ರಚಂಡ - ರಿಪುಗಂಡ ಉದ್ದಂಡ ನರಸಿಂಹನ ಕಂಡೆನಯ್ಯ ಪ
ಘುಡುಘುಡಿಸಿ ಕಂಬದಲಿ ಧಡಧಡ ಸಿಡಿಲು ಸಿಡಿಯೆಕಿಡಿಕಿಡಿಸೆ ನುಡಿಯಡಗಲೊಡನೆ ಮುಡಿವಿಡಿದುಘಡಘಡನೆ ನಡುನಡುಗೆ ಘುಡುಘುಡಿಸಿ ಸಭೆ ಬೆದರೆಹಿಡಿ ಹಿಡಿದು ಹಿರಣ್ಯಕನ ತೊಡೆ ಮೇಲೆ ಕೆಡಹಿದನ1
ಉರದೊಳಪ್ಪಳಿಸಿ ಅರಿ ಬಸಿರ ಸರಸರನೆ ಸೀಳಿಪರಿಪರಿಯಲಿ ಚರ್ಮ ಎಳೆದೆಳೆದು ಎಲುಬು ನರನರವನು ತೆಗೆದು ನಿರ್ಗಳಿತ ಶೋಣಿತ ಸುರಿಯೆಹರಿಹರಿದು ಕರುಳ ಕೊರಳೊಳಿಟ್ಟವನ2
ಪುರಜನರು ಹಾಯೆನಲು ಸುರರು ಹೂಮಳೆಗರೆಯೆತರತರದ ವಾದ್ಯ ಸಂಭ್ರಮಗಳಿಂದಹರಿಹರಿ ಶರಣೆಂದು ಸ್ತುತಿಸಿ ಶಿಶು ಮೊರೆಯಿಡುವಕರುಣಾಳು ಕಾಗಿನೆಲೆಯಾದಿಕೇಶವನ3

No comments:

Post a Comment