Labels

Saturday, 16 November 2019

ಕೀರ್ತನೆಯ ಮಾಡಿ ಕೈವಲ್ಯ keertaneya maadi kaivalya

ಕೀರ್ತನೆಯ ಮಾಡಿ ಕೈವಲ್ಯ ಪಡೆವರು ಜನರು - ಹರಿ ಪ
ಮೂರ್ತಿ ಶ್ರೀ ಚೆನ್ನಕೇಶವನ ಮನದೊಳಗಿಟ್ಟು ಅ
ಹಲುವು ಮಾಯಗಳಿಂದ ಹಂಬಲಿಸಿ ಕೆಡಬೇಡಬಲವಂತರೊಡನೆ ಹಗೆ ಮಾಡಬೇಡಕುಲದಲ್ಲಿ ಜನಿಸಿ ಕುಚೋದ್ಯ ಮಾಡಲುಬೇಡನಲಿದು ಹರಿಯ ಪೊಗಳದ ನಾಲಗೆಯು ಬೇಡ 1
ಮಂದಮತಿಗಳ ಕೂಡ ಮಹಕಥೆಯ ನುಡಿಬೇಡಯತಿಯಾದ ಮೇಲೆ ಸತಿಸುತರಾಸೆ ಬೇಡ..................................................................ಹಿತ ತಪ್ಪಿ ನಡೆವಂಥ ಹೆಂಡತಿಯು ಬೇಡ 2
ಕೆಟ್ಟು ಹೋದವರನ್ನು ತಿರುಗಿ ಕರೆತರಬೇಡಮುಟ್ಟಾದ ಮೇಲೆ ಮೋಹಿಸಿ ಕೂಡಬೇಡಭ್ರಷ್ಟನಾಡಿದನೆಂದು ಸಿಟ್ಟಿನಲಿ ನುಡಿಬೇಡಕಷ್ಟದೆಸೆಯೊಳು ಧೈರ್ಯ ಬಿಟ್ಟು ಕೆಡಬೇಡ 3
ವಿಟಜನರ ಕೂಡಿ ವೇಶ್ಯಾವಾರ್ತೆಗಿಳಿಯಬೇಡಸಟೆ ಹೇಳಿ ಸಂಸಾರ ಕೆಡಿಸಬೇಡತುಟಿ ಮೀರ್ದ ಹಲ್ಲಂತೆ ದೂತ ಎಂದಿಗು ಬೇಡನಿಟಿಲನೇತ್ರನು ನಾನೆನುವ ಜಂಭ ಬೇಡ 4
ತೀರ್ಥ ಯಾತ್ರೆಗೆ ಪೋಗಿ ತಿರುತಿರುಗಿ ಬಳಲಿ ಕೃ-ತಾರ್ಥನಾದೆನು ಎಂಬ ಘನತೆ ಬೇಡಪಾರ್ಥಸಾರಥಿ ಕಾಗಿನೆಲೆಯಾದಿಕೇಶವನಸಾರ್ಥಕದಿ ಭಜಿಸಿ ಸುಖಿಯಾಗು ಮನುಜ 5

No comments:

Post a Comment