ಕೇಳಿರೈ ಶಿವಶರಣರು ಹೇಳಲಂಜಿಕೆ ಆವುದು ಪ
ಭಾಳನೇತ್ರನ ಭಕ್ತರಿಂತು ನೋಡಿಕೊಳ್ಳಿರೈಅ
ಮೂರುಲಿಂಗ ತನ್ನೊಳು ಮುಖ್ಯವಾಗಿರುವಾಗಬೇರೊಂದು ಲಿಂಗ ಬೆಲೆ ಮಾಡಿ ತಂದುತೋರುವಂಗೈಲಿಟ್ಟು ತೋಯ ಪುಷ್ಪವ ನೀಡಿಯಾರ ಮನಕೊಪ್ಪಿಸುವರೀ ಶೀಲವಂತರು 1
ಲಿಂಗವೊಂದು ತನ್ನೊಳು ಲೀನವಾಗಿರುವಾಗಅಂಗಭವಿಗಳು ಕೂಡಿ ಆಡಿಕೊಂಬರುಅಂಗದನುಭವದರ್ಥವನರಿಯದ ಇಂತಹಭಂಗಿ ಹುಚ್ಚರೆಲ್ಲ ಶಿವನ ಭಕ್ತರಹರೆ 2
ನಾಗಲಿಂಗ ತನ್ನೊಳು ನಾಟ್ಯವಾಡುತಲಿರಲುಆಗಮಿಸಿದ ಲಿಂಗವ ಬೆದಕಲೇತಕ್ಕೆಕಾಗಿನೆಲೆಯಾದಿಕೇಶವನೆ ನಾಗಶಯನನಾಗಿರಲು ಬೇರೊಂದನರಸಲೇತಕ್ಕೆ 3
No comments:
Post a Comment