ಕ್ಷಮಿಸುವುದೆಮ್ಮ ತಪ್ಪುಗಳ ಸ್ವಾಮಿಕ್ಷಮಶೀಲವೆಂಬ ದಾಸೋಹ ಬಿರುದಿನೊಳು ಪ
ಕಮಲಜ ಹರಿ ರುದ್ರ ವಿಮಲ ಸುರರು ಸಾಧುಸಮರಲ್ಲವೆಂಬ ಶ್ರುತಿ ಸರಿಬಂತು ಸ್ವಾಮಿ ಅ
ಶರಧಿಯೊಳಿರುತಿರ್ಪ ಚರಜೀವಿಗಳ ಗುಣಾ-ಕರಿಸಿ ಇಷ್ಟೆಂದು ಪೇಳಲುಬಹುದುಸಿರಿವರದನ ಅಂತಃಕರಣಕೊಪ್ಪಿದ ನಿಮ್ಮಇರವ ತಿಳಿಯಲು ನರರ ವಶವೆ ಸ್ವಾಮಿ1
ಆಢಕದೊಳಗಂಬರವನೆ ಅಳೆದು ಲೆಕ್ಕಕೂಡಿದ ಮಿತಿಯ ಪೇಳಲು ಬಹುದುರೂಢಿಗೀಶನ ಸೇವೆ ಮಾಡಿದ ಮುಕ್ತರಈಡಿಲ್ಲವೆಂಬುದನಿತರರರಿವರೆ ಸ್ವಾಮಿ 2
ಈ ಶರೀರದೊಳಗಿಪ್ಪ ಕೇಶಗಳೆಲ್ಲವನುಬೇಸರಿಸದೆಣಿಸಿ ಹೇಳಲು ಬಹುದುಶೇಷಶಯನ ಕಾಗಿನೆಲೆಯಾದಿಕೇಶವದಾಸರ ಮಹಿಮೆ ಕಾಣಲಿಕಾಗದು ಸ್ವಾಮಿ 3
No comments:
Post a Comment