Tuesday, 26 November 2019

ನಾನೇನು ಬಲ್ಲೆ naanena balle

ನಾನೇನು ಬಲ್ಲೆ ನಿಮ್ಮ ನಾಮದ ಸ್ಮರಣೆಯನುಏನೆಂದು ಸ್ತುತಿ ಮಾಡಲರಿಯೆ ಪ
ಹರಿ ಮುಕುಂದನು ನೀನು ನರಜನ್ಮ ಹುಳು ನಾನುಪರಮಪುರುಷನು ನೀನು ಪಾಪಿ ನಾನುಗರುಡ ಗಮನನು ನೀನು ದುರುಳ ಕರ್ಮಿಯು ನಾನುಪರಂಜ್ಯೋತಿಯು ನೀನು ಪಾಮರನು ನಾನು 1
ಅಣುರೇಣು ತೃಣ ಕಾಷ್ಠ ಪರಿಪೂರ್ಣನು ನೀನುಕ್ಷಣಕ್ಷಣಕೆ ಅವಗುಣದ ಕರ್ಮಿ ನಾನುವನಜಸಂಭವನಯ್ಯ ವೈಕುಂಠಪತಿ ನೀನುತನುವು ಸ್ಥಿರವಲ್ಲದ ನರಬೊಂಬೆ ನಾನು 2
ಕಂಬದಲಿ ಬಂದಂಥ ಆನಂದಪತಿ ನೀನುನಂಬಿಗಿಲ್ಲದ ನಿರ್ಜೀವಿ ನಾನುಅಂಬರೀಷಗೆ ಒಲಿದ ದುರಿತ ದೂರನು ನೀನುಡಂಬಕದ ಮಾಯಾ ಶರೀರಿ ನಾನು 3
ವಾರಿಧಿಶಯನ ಭೂರಿ ಕಾರುಣ್ಯಪತಿ ನೀನುಘೋರತರ ಕಾಮಕ್ರೋಧಿಯು ನಾನುಈರೇಳು ಲೋಕವನು ಪೊಡೆಯಲಿಟ್ಟವ ನೀನುಸಾರಿ ಭಜಿಸದ ದುಷ್ಟ ಕರ್ಮಿ ನಾನು 4
ತಿರುಪತಿಯೊಳು ನೆಲಸಿದ ವೆಂಕಟೇಶನು ನೀನುಚರಣಕೆರಗುವ ಕನಕದಾಸನು ನಾನುಬಿರಿದುಳ್ಳ ದೊರೆ ನೀನು ಮೊರೆ ಹೊಕ್ಕೆನಯ್ಯ ನಾನುಮರಣ ಕಾಲಕೆ ಬಂದು ಕಾಯೊ ಹರಿಯೆ5

No comments:

Post a Comment