Thursday, 28 November 2019

ನೀ ಮಾಯೆಯೊಳಗೊ nee Maayeyolago

ನೀ ಮಾಯೆಯೊಳಗೊ ನಿನ್ನೊಳು ಮಾಯೆಯೊ ಪ
ನೀ ದೇಹದೊಳಗೊ ನಿನ್ನೊಳು ದೇಹವೊ ಹರಿಯೆಅ
ಬಯಲೊಳಗೆ ಆಲಯವೊ ಆಲಯದೊಳಗೆ ಬಯಲೊಬಯಲು ಆಲಯವೆರಡು ನಯನದೊಳಗೊನಯನ ಬುದ್ಧಿಯ ಒಳಗೊ ಬುದ್ಧಿ ನಯನದ ಒಳಗೊನಯನ ಬುದ್ಧಿಗಳೆರಡು ನಿನ್ನೊಳಗೊ ಹರಿಯೆ1
ಸವಿಯು ಸಕ್ಕರೆಯೊಳಗೊ ಸಕ್ಕರೆಯು ಸವಿಯೊಳಗೊಸವಿಯು ಸಕ್ಕರೆ ಎರಡು ಜಿಹ್ವೆಯೊಳಗೊಜಿಹ್ವೆ ಮನಸಿನ ಒಳಗೊ ಮನಸು ಜಿಹ್ವೆಯ ಒಳಗೊಜಿಹ್ವೆ ಮನಸುಗಳೆರಡು ನಿನ್ನೊಳಗೊ ಹರಿಯೆ 2
ಕುಸುಮದಲಿ ಗಂಧವೋ ಗಂಧದಲಿ ಕುಸುಮವೋಕುಸುಮ ಗಂಧಗಳೆರಡು ಆಘ್ರಾಣದೊಳಗೊಅಸಮಭವ ಕಾಗಿನೆಲೆಯಾದಿಕೇಶವರಾಯಉಸುರಲೆನ್ನಳವಲ್ಲ ಎಲ್ಲ ನಿನ್ನೊಳಗೊ ಹರಿಯೆ 3

No comments:

Post a Comment