Friday, 29 November 2019

ಪರಮ ಪುರುಷ ಹರಿ ಗೋವಿಂದ paramaatma purusha hari govindana

ಪರಮ ಪುರುಷ ಹರಿ ಗೋವಿಂದ - ಸಿರಿವರ ನಾರಾಯಣ ಗೋವಿಂದ ಪ
ನಿಶೆವೆಸರಸುರನ ಉಸಿರ ತೊಲಗಿಸಿದೆಕುಸುಮ ಶರನ ಪಿತ ಗೋವಿಂದವಸು ಪೂರಿತ ಶ್ರುತಿ ಮಸುಳಿಸದೆ ತಂದೆಬಿಸಜ ಸಂಭವನಯ್ಯ ಗೋವಿಂದ 1
ಜತನದಿ ಮಧುಮಥನದಿ ಮಂದರ ಪರುವತ ಉದ್ಧರಿಸಿದೆ ಗೋವಿಂದಶತ ಕ್ರತುವಿನ ಸಿರಿ ಗತವಾಗದ ಮುನ್ನಕ್ಷಿತಿ ಪೆತ್ತನಯ್ಯ ಗೋವಿಂದ 2
ಭೂತಳವೆರಸಿ ರಸಾತಳಕಿಳಿದಿಹಪಾತಕನ ಕಂಡೆ ಗೋವಿಂದಆತನೊಡನೆ ಕಾದಾತನ ಗೆಲಿದು ಮ-ಹೀತಳವನು ತಂದೆ ಗೋವಿಂದ 3
ದುರುಳಾಸುರನ ನಡುಗರುಳ ಮಾಲೆ ಮುಂ-ಗೊರಳೊಳು ಧರಿಸಿದೆ ಗೋವಿಂದಗರಳ ಕೊರಳನು ಬೆರಳೆತ್ತಿ ಪೊಗಳಲುತರಳಗೊಲಿದೆ ನೀ ಗೋವಿಂದ4
ವಾಮನನಾಗಿ ನಿಸ್ಸೀಮ ಬಲಿಯ ಕೈಯಭೂಮಿಯನಳೆಕೊಂಡೆ ಗೋವಿಂದತಾಮರಸ ಪದದಿ ಕನಕ ಗರ್ಭಯೋಗವ್ಯೋಮ ಗಂಗೆಯ ತಂದೆ ಗೋವಿಂದ 5
ಸುರ ಪಶುವಿಗೆ ಋಷಿಯನು ಕೊಂದನ ಬಹುಕರ ಬಲ ಮುರಿದೆಯೊ ಗೋವಿಂದತರ ಹರಿಸದೆ ವಸುಧೆಯ ಒಡೆತನ ಭೂಸುರರಿಗೆ ನೀಡಿದೆ ಗೋವಿಂದ 6
ತ್ರಿಣಯನ ತಾತ್ಪರ್ಯ ರಾವಣನ ಶಿರರಣದೊಳುರುಳಿಸಿದೆ ಗೋವಿಂದಕ್ಷಣಮೆಣಿಸದೆ ಸದ್ಗುಣವಂತ ವಿಭೀ-ಷಣಗಭಯವಿತ್ತೆ ಗೋವಿಂದ 7
ಮಾರಣ ಕ್ರತು ಸಂಪೂರಣ ಕಂಸ ಸಂ-ಹಾರಣ ಭುಜಬಲ ಗೋವಿಂದವಾರಣಪುರಪತಿ ಸಿರಿ ಭೂಭಾರೋತ್ತಾರಣ ಬಲಯುತ ಗೋವಿಂದ 8
ಕಥೆಯನು ನಿರ್ಮಿಸಿ ಪತಿವ್ರತೆಯರ ಘನವ್ರತಗಳ ಕೆಡಿಸಿದೆ ಗೋವಿಂದಜತೆಯಗಲದ ಪುರ ತ್ರಿತಯ ಗೆಲಿದು ದೇ-ವತೆಗಳ ಸಲಹಿದೆ ಗೋವಿಂದ 9
ಜಾಜಿಯ ಮರಕತ ತೇಜಿಯನೇರಿ ವಿ-ರಾಜಿಪ ರಾವುತ ಗೋವಿಂದಸೂಜಿಯ ಬೆನ್ನೊಳು ರಾಜಿಪ ತೆರದಿ ಸ-ಹಜರೊಳಡಗಿರ್ಪ ಗೋವಿಂದ 10
ಮೇದಿನಿಗೋಸುಗ ಕಾದಿ ಕಲಹದಿ ವಿ-ರೋಧಿಗಳ ಕೊಂದೆ ಗೋವಿಂದಸಾಧುಗಳಿಗೆ ಸುಖವೀಯುವ ಬಾಡದಶ್ರೀಧರ ಕೇಶವ ಗೋವಿಂದ 11

No comments:

Post a Comment